ETV Bharat / state

ಧಾರವಾಡ: ಪಾರ್ಶ್ವವಾಯು ಪೀಡಿತ ಹಿರಿಯ ಉಪನ್ಯಾಸಕನ ನಿವಾಸಕ್ಕೆ ಸಚಿವ ಸುರೇಶ್ ಕುಮಾರ್ ಭೇಟಿ

1999 ರ ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ‌‌. 2015 ರ ಜನವರಿ 15 ರಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

Minister Suresh Kumar
ಸಚಿವ ಸುರೇಶ್ ಕುಮಾರ್
author img

By

Published : Sep 10, 2020, 2:29 PM IST

ಧಾರವಾಡ: ಕಳೆದ ಐದು ವರ್ಷಗಳ ಹಿಂದೆ ಪಾರ್ಶ್ವವಾಯು ಪೀಡಿತರಾಗಿ ಶೇ.100 ರಷ್ಟು ಅಂಗವೈಕಲ್ಯದಿಂದ ಸಂಪೂರ್ಣವಾಗಿ ಹಾಸಿಗೆ ಹಿಡಿದಿರುವ ಕೆಇಎಸ್ ಅಧಿಕಾರಿ, ಬೆಳಗಾವಿ ಡಯಟ್ ಹಿರಿಯ ಉಪನ್ಯಾಸಕ ಮಹದೇವ ಬ.ಮಾಳಗಿ ಅವರ ನಿವಾಸಕ್ಕೆ ಪ್ರಾಥಮಿಕ ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.

ನಗರದ ನಿಸರ್ಗ ಲೇಔಟ್ ನಲ್ಲಿರುವ ಮಹದೇವ ಬ.ಮಾಳಗಿ ನಿವಾಸಕ್ಕೆ ಭೇಟಿ‌ ನೀಡಿದ ‌ಅವರು, ಅಧಿಕಾರಿಯ ಸ್ವಯಂ ನಿವೃತ್ತಿ ಆದೇಶವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಿ ಮಾತನಾಡಿದರು. 1999ರ ಬ್ಯಾಚಿನ ಕೆಇಎಸ್ ಅಧಿಕಾರಿಯಾಗಿರುವ ಮಹದೇವ ಮಾಳಗಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಡಯಟ್ ಹಿರಿಯ ಉಪನ್ಯಾಸಕರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ‌‌. 2015 ರ ಜನವರಿ 15 ರಿಂದ ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿರುವುದರಿಂದ ಅವರಿಗೆ ದೈಹಿಕ ಸಾಮರ್ಥ್ಯ ಇಲ್ಲದಿರುವುದನ್ನು ಪರಿಗಣಿಸಿ ಸರ್ಕಾರ ಸ್ವಯಂ ನಿವೃತ್ತಿ ಆದೇಶ ನೀಡಿದೆ. ಇದರಿಂದ ಅವರಿಗೆ ನಿವೃತ್ತಿ ನಂತರದ ಎಲ್ಲಾ ಸೌಲಭ್ಯಗಳು ದೊರೆಯಲಿವೆ ಎಂದು ಅಭಯ ನೀಡಿದರು.

ನಂತರ ಮಾತು ಮುಂದುವರೆಸಿ, ಕುಟುಂಬದ ಸದಸ್ಯರು ಅನುಕಂಪದ ಆಧಾರಿತ ನೌಕರಿಗೆ ಮನವಿ ಮಾಡಿದ್ದಾರೆ. ಇದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವಾಗಬೇಕಾದ ವಿಷಯವಾಗಿರುವುದರಿಂದ ಮುಂಬರುವ ದಿನಗಳಲ್ಲಿ ವಿಷಯವನ್ನು ಸಭೆಗೆ ಮಂಡಿಸಲು ನಮ್ಮ ಶಕ್ತಿಮೀರಿದ ಪ್ರಯತ್ನ ಮಾಡುತ್ತೇನೆ. ಮುಖ್ಯಮಂತ್ರಿಗಳು ಈ ಕುರಿತು ನಿರ್ಣಯ ಕೈಗೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದರು.

ಮಹದೇವ ಮಾಳಗಿ ಅವರ ಪತ್ನಿ ಪ್ರಭಾವತಿ, ಮಕ್ಕಳಾದ ಸಮೀಕ್ಷಾ, ಸಂಪದಾ ತಮ್ಮ ಸಂಕಷ್ಟಗಳನ್ನು ಸಚಿವರ ಎದುರು ತೋಡಿಕೊಂಡರು. ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ವಿ. ಸಂಕನೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪನಿರ್ದೇಶಕ ಮೋಹನಕುಮಾರ್ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ‌. ಖಾಜಿ, ಉಮೇಶ್ ಬೊಮ್ಮಕ್ಕನವರ ಸೇರಿ ಮತ್ತಿತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.