ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಹಿಂದೆ ಬಿಜೆಪಿಯ ಏಕಪಕ್ಷೀಯ ನಿರ್ಧಾರವಿದೆ. ಇದು ಬಿಜೆಪಿ ಚುನಾವಣೆಯ ಗಿಮಿಕ್ ಆಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುಮಾರು 1000 ಕ್ಕೂ ಅಧಿಕ ಕಡೆಗಳಲ್ಲಿ ಗಣೇಶೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಆದರೆ ಬಿಜೆಪಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಣಯದ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಪಾಲಿಕೆ ಕಮಿಷನರ್ಗೆ ಅಧಿಕಾರ ನೀಡಿದ ಹೈಕೋರ್ಟ್
ಈಗಾಗಲೇ ಕೇಂದ್ರ ಸಚಿವರು ಸದನ ಸಮಿತಿ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆ ಸರಿಯಲ್ಲ. ನಾವು ಮೊದಲಿಂದಲೂ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವುದನ್ನು ವಿರೋಧ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಬಿಜೆಪಿಯವರು ಈ ನಿರ್ಧಾರಕ್ಕೆ ಬಂದು ಸಮಾಜದ ಒಂದು ಕೋಮಿನ ಜನರ ಭಾವನೆಗಳಿಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂಬುದು ನಮ್ಮ ಅಭಿಪ್ರಾಯ ಎಂದರು.