ಧಾರವಾಡ : ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿರುವ ನವಲೂರ ಸೇತುವೆಯ ತಡೆಗೋಡೆ ಕಾಂಕ್ರೀಟ್ ಪ್ಯಾನೆಲ್ಗಳು ಕಳಚಿ ಬೀಳುತ್ತಿವೆ. ಈ ಕುರಿತು ಬಿ ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರ ಬರೆದಿದ್ದಾರೆ.
ಪತ್ರಕ್ಕೆ ಮುಖ್ಯಮಂತ್ರಿ ಸಕರಾತ್ಮವಾಗಿ ಸ್ಪಂದಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಸೂಕ್ತ ಕ್ರಮ ತೆಗೆದುಕೊಂಡು ತ್ವರಿತ ವರದಿ ನೀಡಲು ಆದೇಶಿಸಿದ್ದಾರೆ. ಹಾಗೂ ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು , ಕೆಆರ್‌ಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕರು ಈ ಕುರಿತು ಪರಿಶೀಲಿಸಿ ತನಿಖೆ ನಡೆಸಿ ವರದಿಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ.
ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ ಅವರು ತಮ್ಮ ಫೇಸ್ಬುಕ್ ಪೇಜ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.