ETV Bharat / state

ಬಿಜೆಪಿ ಮತ್ತೆ‌ ಅಧಿಕಾರಕ್ಕೆ: ಮತದಾನ ಮಾಡಿದ ಶಾಸಕ‌ ಅರವಿಂದ ಬೆಲ್ಲದ ವಿಶ್ವಾಸ - MLA Aravinda Bellada reaction about corporation election

ಐಐಟಿ, ರಸ್ತೆ ಅಭಿವೃದ್ದಿ ಸೇರಿದಂತೆ ಮೋದಿ ಅವರು ಮಾಡಿರುವ ಕೆಲಸಗಳನ್ನು ಜನ ನೆನಪಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತಪಡಿಸಿದರು.

MLA Aravinda Bellada
ಮತದಾನ ಮಾಡಿದ ಶಾಸಕ‌ ಅರವಿಂದ ಬೆಲ್ಲದ
author img

By

Published : Sep 3, 2021, 9:52 AM IST

ಧಾರವಾಡ: ಹು-ಧಾ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ನಡೆಯುತ್ತಿದೆ. ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರದ ಶಾಸಕ ಹಾಗೂ ಬಿಜೆಪಿ‌ ಜಿಲ್ಲಾಧ್ಯಕ್ಷ ಅರವಿಂದ ಬೆಲ್ಲದ ಕುಟುಂಬ ಸದಸ್ಯರೊಂದಿಗೆ ಆಗಮಿಸಿ‌ ತಮ್ಮ ಮತದಾನದ ಹಕ್ಕು ಚಲಾಯಿಸಿದರು.

ಧಾರವಾಡದ ಬುದ್ದರಕ್ಕಿತ ಶಾಲೆಯಲ್ಲಿ ಮತದಾನ ಮಾಡಿ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಐಟಿ, ರಸ್ತೆ ಅಭಿವೃದ್ದಿ ಸೇರಿದಂತೆ ಮೋದಿ ಅವರು ಮಾಡಿರುವ ಕೆಲಸಗಳನ್ನು ಜನ ನೆನಪಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಶಾಸಕ ಅರವಿಂದ್ ಬೆಲ್ಲದ ವಿಶ್ವಾಸ ವ್ಯಕ್ತಪಡಿಸಿದರು.

ಮತದಾನ ಮಾಡಿದ ಶಾಸಕ‌ ಅರವಿಂದ ಬೆಲ್ಲದ

ಗ್ಯಾಸ್ ದರ ಏರಿಕೆ ವಿಚಾರವಾಗಿ ಮಾತನಾಡಿದ ಅವರು, ಇಂಟರ್​ ನ್ಯಾಷನಲ್ ಬೆಲೆ ಏರಿರುವ ಹಿನ್ನೆಲೆ ಗ್ಯಾಸ್ ದರ ಏರಿಕೆಯಾಗಿದೆ. ಮತದಾರ ಪ್ರಭುಗಳು ಪ್ರಬುದ್ಧರಾಗಿದ್ದಾರೆ. ವಿಚಾರ ಮಾಡಿ ಮತದಾನ ಮಾಡುತ್ತಾರೆ. ಈ ಬಾರಿ 55 ರಿಂದ 60 ಸೀಟುಗಳನ್ನು ನಾವು ಗೆಲ್ಲುತ್ತೇವೆ. ಪಕ್ಷೇತರ ಅಭ್ಯರ್ಥಿಗಳಿಂದ ಏನೂ ತೊಂದರೆಯಾಗುವುದಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.