ETV Bharat / state

ಕಾಂಗ್ರೆಸ್ ಕಾರ್ಯಕರ್ತರಲ್ಲಿ ‌ಭಯ ಸೃಷ್ಟಿಸಲು ಐಟಿ‌,ಇಡಿ ದಾಳಿ ನಡೆಸುತ್ತಿದ್ದಾರೆ: ಲಕ್ಷ್ಮಿ ‌ಹೆಬ್ಬಾಳ್ಕರ್ - ಲಕ್ಷ್ಮಿ ‌ಹೆಬ್ಬಾಳ್ಕರ್ ಲೇಟೆಸ್ಟ್ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಅವರ ಆಪ್ತ ಯು.ಬಿ.ಶೆಟ್ಟಿ ಮನೆ ಮೇಲಿನ ಐಟಿ ದಾಳಿ ವಿಚಾರವಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.

MLA Lakshmi hebbalkar
ಲಕ್ಷ್ಮಿ ‌ಹೆಬ್ಬಾಳ್ಕರ್
author img

By

Published : Oct 28, 2021, 3:20 PM IST

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಯಕರ್ತರಲ್ಲಿ ‌ಭಯ ಸೃಷ್ಟಿ ಮಾಡಲು ಐಟಿ‌, ಇಡಿ ದಾಳಿ ಮಾಡಿಲಾಗುತ್ತಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾರ್ಯಕರ್ತರಲ್ಲಿ ಭಯ ಸೃಷ್ಟಿ ಮಾಡಲು ರಾಜಕಾರಣ ಮಾಡುತ್ತಿದ್ದಾರೆ. ಎಲ್ಲ ರಾಜ್ಯಗಳಲ್ಲಿ ಈ ರೀತಿ ಆಗುತ್ತಿದೆ. ಇಡಿ, ಐಟಿಗೆ ನಾವು ಹೆದರುವುದಿಲ್ಲ. ಇದಾವುದು ಕೂಡ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲ್ಲ ಎಂದು ಡಿಕೆ ಶಿವಕುಮಾರ್​​ ಅವರ ಆಪ್ತ ಯು.ಬಿ.ಶೆಟ್ಟಿ ಮನೆ ಮೇಲೆ ದಾಳಿ ಬಗ್ಗೆ ಪ್ರತಿಕ್ರಿಯಿಸಿದರು.

ಮೊದಲಿಂದಲೂ ಡಿಕೆಶಿವಕುಮಾರ್​ ಶೆಟ್ಟಿಯವರ ಜೊತೆ ಇದ್ದಾರೆ. ನಮ್ಮ ಕಾರ್ಯಕರ್ತರ ನೈತಿಕತೆ ಕಡಿಮೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಧಾರವಾಡ: ಕಾಂಗ್ರೆಸ್ ಮುಖಂಡನ ಆಪ್ತನ ಮನೆ ಮೇಲೆ ಐಟಿ ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.