ಧಾರವಾಡ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕೋವಿಡ್ ಮಹಾಮಾರಿಯಿಂದ ವರ್ಚುವಲ್ (ಆನ್ಲೈನ್) ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಪಾಲಕರು ಮೊಬೈಲ್ಗಳನ್ನೂ ನೀಡುತ್ತಿದ್ದಾರೆ. ಅದನ್ನು ದುರುಪಯೋಗ ಪಡಿಸಿಕೊಳ್ಳದೆ ಸರಿಯಾದ ರೀತಿಯಲ್ಲಿ ಉಪಯೋಗಿಸಲು ಶಿಕ್ಷಕರು ಹಾಗೂ ಪಾಲಕರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕು ಎಂದರು.
ಅರೋಗ್ಯಪೂರ್ಣ ಸಮಾಜ ನಿರ್ಮಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಆ ಕರ್ತವ್ಯವನ್ನು ಸರಿಯಾದ ರೀತಿಯಲ್ಲಿ ನಿಭಾಯಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜಗತ್ತನ್ನೇ ಕಾಡುತ್ತಿರುವ ಕೋವಿಡ್-19 ಸೋಂಕಿನಿಂದ ಜನರ ರಕ್ಷಣೆಗೆ ಹಗಲು ರಾತ್ರಿ ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಧನ್ಯವಾದ ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.