ಧಾರವಾಡ: ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೀಡಿದ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಭರವಸೆ ವ್ಯಕ್ತಪಡಿಸಿದ್ದಾರೆ. ನನಗೂ ಈ ವಿಷಯ ಮಾಧ್ಯಮದ ಮೂಲಕ ಗೊತ್ತಾಗಿದೆ. ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಬಂದ್ರೂ ಸಹ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
ಮೊದಲಿನಿಂದ ಗ್ರಾಮೀಣ ಭಾಗಕ್ಕೆ ಸಚಿವ ಸ್ಥಾನ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಆದ್ರೆ ಸರ್ಕಾರ ನಿಗಮ ಮಂಡಳಿ ನೀಡಿದೆ. ನೇಮಕ ಮಾಡಿರುವುದು ಖುಷಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ನೀಡುವುದಕ್ಕೆ ಕಾರ್ಯಕರ್ತರ ಒತ್ತಾಯವಿದೆ. ಮುಂದೆ ಸಚಿವ ಸ್ಥಾನ ಸಿಗುವ ಭರವಸೆಯಿದೆ. ಕ್ಷೇತ್ರ ಅಭಿವೃದ್ಧಿ ಹಾಗೂ ನಗರ ಅಭಿವೃದ್ಧಿಗೆ ಶ್ರಮಿಸುವೆ. ಸರ್ಕಾರ ಹಾಗೂ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದರು.