ETV Bharat / state

ಜ.12ರಂದು ಹುಬ್ಬಳ್ಳಿಗೆ ಮೋದಿ ಆಗಮನ .. ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ, ಪರಿಶೀಲನೆ - gurudutta hegde district commissioner

26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ - ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಡಲು ಜಿಲ್ಲಾಡಳಿತ ಸಕಲ ತಯಾರಿ- ಹುಬ್ಬಳ್ಳಿ ರೈಲ್ವೆ ಮೈದಾನ ಪರಿಶೀಲಿಸಿದ ಸಚಿವ ಜೋಶಿ

modis-arrival-in-hubli-union-minister-prahlad-joshis-visit-to-railway-maidan
ಹುಬ್ಬಳ್ಳಿಗೆ ಮೋದಿ ಆಗಮನ ಹಿನ್ನೆಲೆ: ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ
author img

By

Published : Jan 4, 2023, 4:28 PM IST

Updated : Jan 4, 2023, 5:29 PM IST

ಜ.12ರಂದು ಹುಬ್ಬಳ್ಳಿಗೆ ಮೋದಿ ಆಗಮನ .. ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ, ಪರಿಶೀಲನೆ

ಹುಬ್ಬಳ್ಳಿ: ಜನವರಿ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರು ಭೇಟಿ ನೀಡಿ, ಕಾರ್ಯಕ್ರಮ ನಡೆಯುವ ಸ್ಥಳವನ್ನು ಪರಿಶೀಲನೆ ನಡೆಸಿದರು.

ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಈಗಾಗಲೇ ಪ್ರಧಾನಮಂತ್ರಿ ಅವರ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಸಮಯ ಅಂತಿಮವಾಗಿಲ್ಲ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಯಕ್ರಮಕ್ಕೆ ಆಗಮಿಸುವ ಕುರಿತಂತೆ ಪ್ರಧಾನಿಯವರ ಕಚೇರಿಯಿಂದ ಯಾವುದೇ ಅಂತಿಮ ಸೂಚನೆಗಳು ಬಂದಿರುವುದಿಲ್ಲ. ಕಾರ್ಯಕ್ರಮದ ಸಮಯವು ಸಹ ಅಂತಿಮವಾಗಿರುವುದಿಲ್ಲ. ಒಟ್ಟಿನಲ್ಲಿ ಕಾರ್ಯಕ್ರಮದ ಭದ್ರತೆ, ಸುರಕ್ಷತಾ ಕ್ರಮಗಳು ಮತ್ತು ಸಾರಿಗೆ ಸೇರಿದಂತೆ ಇತರ ಅಗತ್ಯತೆಗಳ ಬಗ್ಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿವರಿಸಿದರು.

ಸಾರ್ವಜನಿಕರು ಸಹಕಾರ ಅಗತ್ಯ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮಣ್​ ಗುಪ್ತಾ ಮಾತನಾಡಿ, ಜನವರಿ 12 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅವಳಿ ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಸುರಕ್ಷತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಪೊಲೀಸ್ ಇಲಾಖೆಯ ಜೊತೆಗೆ ಸಹಾಯ ಸಹಕಾರದಿಂದ ನಡೆದುಕೊಳ್ಳಬೇಕು. ಕಾರ್ಯಕ್ರಮದ ಯಶಸ್ವಿಗೆ ಕಾರಣಿ ಭೂತರಾಗಬೇಕಾಗಿದೆ ಎಂದು ಹೇಳಿದರು.

ಸ್ವಾಮಿ ವಿವೇಕಾನಂದರ ಜನ್ಮದಿನದ ನೆನಪಿಗಾಗಿ ಪ್ರತಿವರ್ಷ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತದೆ. ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ಯವನ್ನು ಕರ್ನಾಟಕ ವಹಿಸಿಕೊಂಡಿದ್ದು, ಅವಳಿ ನಗರವಾದ ಹುಬ್ಬಳ್ಳಿ ಧಾರವಾಡದಲ್ಲಿ ಜನವರಿ 12 ರಿಂದ 16 ರವರೆಗೆ ಕಾರ್ಯಕ್ರಮ ನಡೆಯಲಿದೆ. ಯುವಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 7 ಸಾವಿರಕ್ಕೂ ಹೆಚ್ಚು ಪತ್ರಿನಿಧಿಗಳು ಯುವಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಹುಬ್ಬಳ್ಳಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಆಯೋಜಿಸಲಾಗಿದೆ.

ಆಹಾರ ಮೇಳ: ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಆಹಾರ ಮೇಳವು ಸಹ ನಡೆಯಲಿದೆ. ದೇಶದ ವಿವಿಧ ಭಾಗದ ಆಹಾರ ಪ್ರದರ್ಶನ ಮತ್ತು ಮಾರಾಟವು ನಡೆಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಐದು ದಿನ ನಡೆಯುವ ಈ ಕಾರ್ಯಕ್ರಮದಲ್ಲಿ ನಿತ್ಯವೂ ವಿವಿಧ ರೀತಿಯ ಮನರಂಜನಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಿಗದಿ ಪಡಿಸಿದ ಸ್ಥಳಗಳಲ್ಲಿ ಜರುಗಲಿವೆ.

ರಾಷ್ಟ್ರ ನಿರ್ಮಾಣದ ಕಡೆಗೆ ಯುವಜನಾಂಗವನ್ನು ಏಕೀಕರಿಸುವ ಉದ್ದೇಶ: ಕಳೆದ ವರ್ಷ ನಡೆದ 25ನೇ ರಾಷ್ಟ್ರಿಯ ಯುವಜನೋತ್ಸವ ಕಾರ್ಯಕ್ರಮವು ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​​ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಯುವಜನೋತ್ಸವ ಕಾರ್ಯಕ್ರಮವು ದೇಶದ ಯುವಜನಾಂಗವನ್ನು ಪ್ರೇರೇಪಿಸುವುದು ಮತ್ತು ರಾಷ್ಟ್ರ ನಿರ್ಮಾಣದ ಕಡೆಗೆ ಯುವಜನರನ್ನು ಏಕೀಕರಿಸವುದು ರಾಷ್ಟ್ರೀಯ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಯುವಜನೋತ್ಸವ ಕಾರ್ಯಕ್ರಮಕ್ಕೆ ಮೋದಿ ಆಗಮನ.. ನಟ ಅಕ್ಷಯ್​ ಕುಮಾರ್​ಗೆ ಸಚಿವ ಜೋಶಿ ಕರೆ

Last Updated : Jan 4, 2023, 5:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.