ಧಾರವಾಡ: ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು ಸೋಂಕಿತ ವ್ಯಕ್ತಿಯ ಮನೆಯಿಂದ 100 ಮೀಟರ್ ಅಂತರದವರೆಗಿನ ಪ್ರದೇಶವನ್ನು ನಿರ್ಬಂಧಿತ ವಲಯವೆಂದು ಘೋಷಿಸಿ ಸಂಪೂರ್ಣ ಪ್ರದೇಶವನ್ನು ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಮೊರಬ ಗ್ರಾಮವನ್ನು ಬಫರ್ ಝೋನ್ ಎಂದು ಘೋಷಿಸಿ ಕೊರೊನಾ ಸೋಂಕು ಹರಡದಂತೆ ತಡೆಯಲು ಈ ಸ್ಥಳದಲ್ಲಿ ಸದಾ ಕಣ್ಗಾವಲು ಮತ್ತು ಸಾಮಾಜಿಕ ಅಂತರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ನಿರ್ಬಂಧಿತ ವಲಯದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಹಾಗೂ ಸಂಸ್ಥೆಯವರು ಆಹಾರ ಹಾಗೂ ಇತರೆ ಸೇವೆಗಳನ್ನು ವಿತರಿಸುವುದನ್ನು ಸಹ ನಿಷೇಧ ಮಾಡಲಾಗಿದೆ.