ETV Bharat / state

ಶಕ್ತಿ ಯೋಜನೆ: ವಾಯವ್ಯ ಸಾರಿಗೆಯಲ್ಲಿ ₹2 ಕೋಟಿಗೂ ಹೆಚ್ಚು ಮಹಿಳೆಯರ ಪ್ರಯಾಣ - ವಾಕರಸಾ ಸಂಸ್ಥೆ

ಸಾರಿಗೆ ಬಸ್​ಗಳಲ್ಲಿ ಜೂನ್ 27ರಂದು 14.88 ಲಕ್ಷ ಮಹಿಳೆಯರು ಹಾಗೂ 11.43 ಲಕ್ಷ ಪುರುಷರು ಸೇರಿದಂತೆ ಒಟ್ಟು 76.31 ಲಕ್ಷ ಜನರು ಪ್ರಯಾಣ ಮಾಡಿದ್ದಾರೆ ಎಂದು ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್.

nwkrtc
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
author img

By

Published : Jun 28, 2023, 9:27 PM IST

ಹುಬ್ಬಳ್ಳಿ: ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಬಹಳಷ್ಟು ಸ್ಪಂದನೆ ಸಿಗುತ್ತಿದೆ. ಪ್ರಸ್ತುತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಪ್ರಯಾಣ ಮಾಡಿದ ಮಹಿಳೆ ಸಂಖ್ಯೆ ಈಗ 2 ಕೋಟಿ ದಾಟಿದೆ. ಸಾರ್ವಜನಿಕ ಪ್ರಯಾಣಿಕರ ಸಹಭಾಗಿತ್ವ ಹಾಗೂ ಸಹಕಾರದಿಂದ ಯೋಜನೆ ಯಶಸ್ವಿಯಾಗಿ ಮುಂದುವರೆಯುತ್ತಿದೆ ಎಂದು ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗಿದೆ. ಯೋಜನೆ ಜಾರಿಯಾದ ಬಳಿಕ ಮಹಿಳೆಯರುಸಹಿತ ಪುರುಷ ಪ್ರಯಾಣಿಕರಿಂದ ರಾಜ್ಯಾದ್ಯಂತ ಸಂಚರಿಸುವ ಬಸ್​ಗಳು ಫುಲ್ ರಶ್​ ಆಗುತ್ತಿವೆ. ಮಹಿಳೆಯರಿಗೆ ಉಚಿತ ಪ್ರಯಾಣವೂ ಬಹಳಷ್ಟು ಅನುಕೂಲವಾಗಿದೆ ಎಂದು ಹೇಳಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಜೂನ್ 27ರಂದು ರಂದು ಒಟ್ಟು 14,88,320 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 3,68,72,769 ಗಳಾಗಿದೆ. ಇದರೊಂದಿಗೆ ಶಕ್ತಿ ಯೋಜನೆಯ ಆರಂಭದ ದಿನ ಜೂ.11ರಿಂದ ಜೂ.27 ರವರೆಗೆ ಒಟ್ಟು 2,14,75,162 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 54,44,96,848 ಗಳಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : KMF Nandini: ನಂದಿನಿ ಹಾಲು ಮಾರಾಟಕ್ಕೆ ಕೇರಳದಲ್ಲಿ ವಿರೋಧ; ಮಳಿಗೆ ವಿಸ್ತರಿಸದಿರಲು ಕೆಎಂಎಫ್ ನಿರ್ಧಾರ

ಜೂನ್ 27 ರಂದು 76.31 ಲಕ್ಷ ಜನರಿಂದ ಪ್ರಯಾಣ: ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು ಒಟ್ಟಾರೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಯೋಜನೆ ಜಾರಿಗೆ ಹಿಂದಿನ ಮಂಗಳವಾರ ಜೂನ್ 6 ರಂದು ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಒಟ್ಟು 18.27 ಲಕ್ಷ ಜನರು ಪ್ರಯಾಣ ಮಾಡಿದ್ದರು. ಜೂನ್ 27 ರಂದು 14.88 ಲಕ್ಷ ಮಹಿಳೆಯರು ಹಾಗೂ 11.43 ಲಕ್ಷ ಪುರುಷರು ಸೇರಿದಂತೆ ಒಟ್ಟು 76.31 ಲಕ್ಷ ಜನರು ಪ್ರಯಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯು ಯಶಸ್ವಿಯಾಗಿ ಮುಂದುವರಿಯಲು ಮಹಿಳಾ ಪ್ರಯಾಣಿಕರು ಸೇರಿದಂತೆ ಎಲ್ಲ ಸಾರ್ವಜನಿಕ ಪ್ರಯಾಣಿಕರ ಸಹಭಾಗಿತ್ವ ಹಾಗೂ ಸಹಕಾರ ಕಾರಣವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ. ಇದೇ ವೇಳೆ ವಿವಿಧ ಹಂತಗಳಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ ಯೋಜನೆಯ ಯಶಸ್ಸಿಗೆ ಶ್ರಮಿಸುತ್ತಿರುವ ಚಾಲಕರು,ನಿರ್ವಾಹಕರು ಸೇರಿದಂತೆ ಸಂಸ್ಥೆಯ ಎಲ್ಲಾ ನೌಕರರನ್ನು ವ್ಯವಸ್ಥಾಪಕ ನಿರ್ದೇಶಕರು ಅಭಿನಂದಿಸಿದ್ದಾರೆ.

ಇದನ್ನೂ ಓದಿ : Annabhagya: ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ: ಅಕ್ಕಿ ಬದಲು ಹಣ ಪಾವತಿಸಲು ಸರ್ಕಾರ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.