ದಾವಣಗೆರೆ: ರಾಜ್ಯ ಮಟ್ಟದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾವಳಿಯಲ್ಲಿ ಮೋತಿ ವೀರಪ್ಪ ಪ್ರೌಢಶಾಲೆಯ ಕ್ರೀಡಾಪಟುಗಳು ಬೆಂಗಳೂರು ವಿಭಾಗ ತಂಡವನ್ನು ಪ್ರತಿನಿಧಿಸಿ, ಪ್ರಥಮ ಸ್ಥಾನ ಪಡೆದಿದ್ದಾರೆ.
ಲೀಗ್ ಮಾದರಿಯಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬೆಳಗಾವಿ, ಮೈಸೂರು, ಹಾಗೂ ಗುಲ್ಬರ್ಗ ಜಿಲ್ಲೆಗಳ ಕ್ರೀಡಾಪಟುಗಳ ತಂಡದ ವಿರುದ್ಧ ಆಡಿ, ಎಲ್ಲಾ ಪಂದ್ಯಗಳಲ್ಲಿ ಗೆಲುವು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜೇತ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ ಶ್ರೀನಿವಾಸ, ಇಲಾಖೆಯ ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.