ETV Bharat / state

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ - etv bharat karnataka

ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

murder-of-a-grama-panchayat-member-over-property-issue-in-hubli
ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
author img

By ETV Bharat Karnataka Team

Published : Nov 22, 2023, 10:48 PM IST

ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದೆ. ಬಗಡಗೇರಿ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ದಾಸಪ್ಪನವರ ಹತ್ಯೆಯಾದವರು. ಆಸ್ತಿ ವಿಚಾರವಾಗಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದ ಮಗಳ‌ ಪ್ರಿಯಕರನ ಹತ್ಯೆ ಆರೋಪ: ಯುವತಿ ತಂದೆ ಬಂಧನ

ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ: ಇತ್ತೀಚಿಗೆ, ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ ಮಲಗಿದ್ದ ಸಮಯದಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಪತಿಯೇ ಹತ್ಯೆ ಮಾಡಿದ್ದ ಘಟನೆ ಮಂಡ್ಯ ನಗರದ ವಿವಿ ನಗರ ಬಡಾವಣೆಯಲ್ಲಿ ನಡೆದಿತ್ತು. ಎಸ್. ಶೃತಿ (32) ಕೊಲೆಯಾದವರು. ಟಿ.ಎನ್. ಸೋಮಶೇಖರ್ (41) ಕೊಲೆ ಮಾಡಿದ ಪತಿ.

ಕೊಲೆಯಾದ ಎಸ್ ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದನ್ನು ಮಾರಾಟ ಮಾಡಲು ಅವರು ಪ್ರಯತ್ನಿಸುತ್ತಿದ್ದರು. ಇದನ್ನು ಒಪ್ಪದ ಪತಿ ಸೋಮಶೇಖರ್ ಎಲ್ಲ ಆಸ್ತಿಯನ್ನು ತನ್ನದಾಗಿಸಿಕೊಳ್ಳುವ ಉದ್ದೇಶದಿಂದ ನ.10ರಂದು ರಾತ್ರಿ ಮಲಗಿದ್ದ ಸಮಯದಲ್ಲಿ ದಿಂಬು ಮತ್ತು ಬೆಡ್‌ಶೀಟ್​ಅನ್ನು ಶೃತಿಯ ಮುಖದ ಮೇಲೆ ಬಿಗಿಯಾಗಿ ಅದುಮಿ, ಉಸಿರುಗಟ್ಟಿಸಿ ಸಾಯಿಸಿರುವುದಾಗಿ ಪೊಲೀಸರೆದರು ತಪ್ಪೊಪ್ಪಿಕೊಂಡಿದ್ದ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.