ಧಾರವಾಡ : ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಧಾರವಾಡದ ಸಿಬಿಐ ವಿಶೇಷ ಕೋರ್ಟ್ನಲ್ಲಿ ಇಂದು ಮಧ್ಯಾಹ್ನ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಧಾರವಾಡದ 3ನೇ ಸೆಷನ್ ಕೋರ್ಟ್ ಆದೇಶಿಸಿತ್ತು.
ನ್ಯಾಯಾಂಗ ಬಂಧನ ಅಂತ್ಯ ಹಿನ್ನೆಲೆ, ಮಧ್ಯಾಹ್ನದ ಬಳಿಕ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಈಗಾಗಲೇ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.