ETV Bharat / state

ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕೆ ಕಿರುಕುಳ: ಅಬ್ದುಲ್ ಮುನಾಫ್ ಐನಾಪುರಿ ಆರೋಪ - ಅಬ್ದುಲ್ ಮುನಾಫ್ ಐನಾಪುರಿ ಆರೋಪ

ಕೆಲವರು ಜಮಾತ್ ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಕ್ಪ್ ಬೋರ್ಡ್‌ನಲ್ಲಿರುವ ಅಂಗಡಿ ಖಾಲಿ ಮಾಡುವಂತೆ ನೋಟಿಸ್ ಸಹ ನೀಡಿದ್ದಾರೆ. ಜೊತೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಬ್ದುಲ್ ಮುನಾಫ್ ಐನಾಪುರಿ ಆರೋಪಿಸಿದ್ದಾರೆ.

Muslim leader Abdul Munaf Ainapuri accused
ಅಬ್ದುಲ್ ಮುನಾಫ್ ಐನಾಪುರಿ ಆರೋಪ
author img

By

Published : Mar 16, 2021, 8:12 AM IST

ಹುಬ್ಬಳ್ಳಿ: ನಾನು ಬಿಜೆಪಿಗೆ ಸೇರ್ಪಡೆಗೊಂಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ಅಲ್ತಾಪ್ ಹಳ್ಳೂರು ಅವರಿಂದ ಕಿರುಕುಳ ಆಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ ನಂ.54 ರ ಮುಲ್ಲಾನ ಓಣಿ ಮುಖಂಡ ಅಬ್ದುಲ್ ಮುನಾಫ್ ಐನಾಪುರಿ ಗಂಭೀರ ಆರೋಪ ಮಾಡಿದ್ದಾರೆ.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಆಸೆ,‌ಆಮಿಷ ಹಾಗೂ ವ್ಯಕ್ತಿಯನ್ನು ನೋಡಿ ಬಿಜೆಪಿಗೆ ಹೋಗಿಲ್ಲ. ಬಿಜೆಪಿಯಲ್ಲಿನ ಜನಪರ ಕಾರ್ಯ ಹಾಗೂ ಅಭಿವೃದ್ಧಿ ಪರ ಕಾರ್ಯಗಳನ್ನು ಮೆಚ್ಚಿಕೊಂಡರು ಬಿಜೆಪಿ ಹೋಗಿದ್ದೇನೆ. ಆದರೆ, ಕೆಲವರು ಜಮಾತ್ ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ವಕ್ಪ್ ಬೋರ್ಡ್‌ನಲ್ಲಿರುವ ಅಂಗಡಿಯನ್ನು ಖಾಲಿ ಮಾಡುವಂತೆ ನೋಟಿಸ್ ಸಹ ನೀಡಿದ್ದಾರೆ. ಜೊತೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಬ್ದುಲ್ ಮುನಾಫ್ ಐನಾಪುರಿ ಆರೋಪಿಸಿದರು.

ಅಬ್ದುಲ್ ಮುನಾಫ್ ಐನಾಪುರಿ ಆರೋಪ

ಯಾವುದೇ ಬೈಲಾದಲ್ಲಿ ಕೂಡ ಮುಸ್ಲಿಂಮರು ಇದೇ ಪಕ್ಷದಲ್ಲಿ ಇರಬೇಕು ಎಂಬುವಂತ ಕಡ್ಡಾಯ ನಿರ್ಣಯವಿಲ್ಲ. ನಾನು ಸ್ವಯಂ ಪ್ರೇರಿತವಾಗಿ ಬಿಜೆಪಿ ಸೇರಿದ್ದಕ್ಕೆ ನನಗೆ ಅಂಗಡಿ ಖಾಲಿ ಮಾಡುವಂತೆ ಒತ್ತಡ ಹೇರಿದ್ದಾರೆ. ಅಲ್ಲದೇ ‌ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡರು. ಮುಲ್ಲಾನ ಓಣಿ, ಕೌಲಪೇಟ ಸುತ್ತಮುತ್ತಲಿನ ಮುಸಲ್ಮಾನ ಮುಖಂಡರು ಹಾಗೂ ವಿವಿಧ ಪೂರ್ವ ಕ್ಷೇತ್ರದ ಮುಸಲ್ಮಾನ ಮುಂಖಡರು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್​ ಅವರ ಸಮ್ಮುಖದಲ್ಲಿ, ಭಾರತೀಯ ಜನತಾ ಪಾರ್ಟಿ ತತ್ವ ಸಿದ್ದಾಂತ ಮೆಚ್ಚಿ ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಕ್ಕೆ ಮುಸ್ಲಿಂ ಸಮಾಜದಲ್ಲಿನ ಕೆಲವರ ಸ್ವಾರ್ಥ ರಾಜಕಾರಣಕ್ಕೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ಆರೋಪಿಸಿದರು.

ಓದಿ : ಅಕ್ರಮ ಕಟ್ಟಡ ನಿರ್ಮಾಣ ಆರೋಪ.. ಕಾಮಗಾರಿ ಸ್ಥಗಿತಗೊಳಿಸಲು ಡಿಸಿಎಫ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.