ಧಾರವಾಡ: ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್ ಅಸಾಂವಿಧಾನಿಕವಾಗಿದೆ ಎಂದು ಆರೋಪಿಸಿರುವ ಅಂಜುಮನ್ ಇಸ್ಲಾಂ ಸಂಸ್ಥೆಯು, ತಕ್ಷಣವೇ ಕಾಯ್ದೆಯನ್ನು ಕೈಬಿಡುವಂತೆ ನಗರದಲ್ಲಿ ಪ್ರತಿಭಟನೆ ನಡೆಸಿತು.
ಧಾರವಾಡದ ಇಸ್ಲಾಂ ಸಂಸ್ಥೆ ಆವರಣದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಮಹಿಳೆಯರು, ಎನ್ಆರ್ಸಿ ಹಾಗೂ ಸಿಎಎ ಕಾಯ್ದೆಗಳನ್ನು ತಕ್ಷಣ ಕೈಬಿಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಕಾಯ್ದೆ ಕೈಬಿಡಬೇಕೆಂದು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಿಸಿದರು.
ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ, ಇದರಿಂದ ಮುಸ್ಲಿಮರಿಗೆ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಈ ಕಾಯ್ದೆ ದಲಿತ, ಹಿಂದುಳಿದ ವರ್ಗದ ಬುಡಕಟ್ಟು ಜನಾಂಗದವರಿಗೆ ಅಪಾಯಕಾರಿಯಾಗಲಿದೆ. ಇಷ್ಟೆಲ್ಲಾ ತಿಳಿದಿದ್ದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಭಾರತದ ನಾಗರೀಕತ್ವ ನೀಡುವ ನೆಪದಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದೆ ಎಂದು ಆರೋಪಿಸಿದರು.