ಹುಬ್ಬಳ್ಳಿ: ಭಾನುವಾರ ಕರ್ಫ್ಯೂ ಮುಕ್ತಾಯವಾದ ಬಳಿಕ ನಗರಾದ್ಯಂತ ಅಂಗಡಿ ಮುಂಗಟ್ಟುಗಳು ಓಪನ್ ಆಗಿವೆ. ಅದರ ಜೊತೆಗೆ ಎಂದಿನಂತೆ ನಗರ ಸಾರಿಗೆ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ಸಂಚಾರ ಆರಂಭಗೊಂಡಿದೆ. ಜನರು ಕೂಡ ತಮ್ಮ ದೈನಂದಿನ ಕಾರ್ಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ಆದರೆ ಇದೇ ಮೊದಲ ಬಾರಿಗೆ ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಪ್ರಾರ್ಥನೆ ಸಲ್ಲಿಸಲು ಅವಕಾಶ ಸಿಕ್ಕಿಲ್ಲ. ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುವಂತೆ ಅಂಜುಮನ್ ಇಸ್ಲಾಂ ಸಂಸ್ಥೆ ಸೂಚನೆ ನೀಡಿದೆ. ಹೀಗಾಗಿ ಇದೇ ಮೊದಲ ಬಾರಿಗೆ ಚೆನಮ್ಮ ವೃತ್ತದ ಬಳಿಯ ಈದ್ಗಾ ಮೈದಾನ ಜನರಿಲ್ಲದೆ ಬಿಕೋ ಎನ್ನುತ್ತಿದೆ. ಪೊಲೀಸ್ ಇಲಾಖೆಯು ಕೂಡ ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ನೀಡಿದೆ.