ಧಾರವಾಡ: ರಾಮ ಜನ್ಮ ಭೂಮಿಗಾಗಿ ಐದುನೂರು ವರ್ಷ ಹೋರಾಟ ಮಾಡಿದ್ದೇವೆ. ತಮಿಳುನಾಡಿನ ಮಾಜಿ ಸಿಎಂ ದಿ. ಕರುಣಾನಿಧಿ ಅವರು ರಾಮ ಸೇತುವೆ ಇದೆ ಎನ್ನುವುದಕ್ಕೆ ಸಾಕ್ಷಿ ಕೊಡಿ ಎಂದಿದ್ದರು. ಅದನ್ನ ನಾನು ಕೊಡ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದರು.
ಧಾರವಾಡದ ಕಲಾಭವನದ ಆವರಣದಲ್ಲಿ ನಿನ್ನೆ ರಾತ್ರಿ ನಡೆದ ರಾಷ್ಟ್ರೀಯ ಹಿಂದೂ ಪರಿಷತ್ ಲಾಂಛನ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಈ ಹೇಳಿಕೆ ನೀಡಿದ್ದಾರೆ. ಇದೇ ವೇಳೆ ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ. ಈ ಮಧ್ಯೆ, ಓವೈಸಿ ವಿರುದ್ಧ ಕೂಡಾ ಮುತಾಲಿಕ್ ಹರಿಹಾಯ್ದಿದ್ದಾರೆ.