ಹುಬ್ಬಳ್ಳಿ : ಕಳಸಾ-ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗುವುದು ಎಂದು ಮಾಜಿ ಶಾಸಕ, ಕಾಂಗ್ರೆಸ್ ಧುರೀಣ ಎನ್. ಹೆಚ್. ಕೋನರಡ್ಡಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕಾಗಿ ಹುಬ್ಬಳ್ಳಿಯಲ್ಲಿ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಎಂ. ಬಿ ಪಾಟೀಲ್, ಶಾಸಕರು ಸೇರಿದಂತೆ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಿ ಹೋರಾಟದ ರೂಪುರೇಷೆ ಮಾಡಿ ಆ ಯೋಜನೆ ಜಾರಿಯಾಗುವವರೆಗೆ ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟ ಮಾಡುವುದಾಗಿ ಅವರು ತಿಳಿಸಿದರು.
ಈ ಹೋರಾಟಕ್ಕೆ ಕನ್ನಡ ಪರ ಸಂಘಟನೆ, ರೈತಪರ ಸಂಘಟನೆಗಳು ಬೆಂಬಲ ಕೊಡಲಿವೆ. ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿ ಹೋರಾಟ ಮಾಡಲಿದೆ. ಡಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿಗರು ಈ ಸಮಸ್ಯೆ ಬಗೆಹರಿಸಬೇಕಿದೆ ಎಂದು ಕೋನರೆಡ್ಡಿ ಹೇಳಿದರು.
ಓದಿ: ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸಿಎಂ ಆಗಲೆಂದು ಶ್ರೀರಾಮ ಭಕ್ತರಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ