ETV Bharat / state

ನಷ್ಟದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ: 200 ಕೋಟಿ ಸಾಲಕ್ಕೆ ಅರ್ಜಿ ಆಹ್ವಾನ

ಕೋವಿಡ್​ ಹಿನ್ನೆಲೆ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಷ್ಟ ಅನುಭವಿಸಿರುವ ಹಿನ್ನೆಲೆ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.

dsdx
200 ಕೋಟಿ ಸಾಲ ಪಡೆಯಲು ಅರ್ಜಿ ಆಹ್ವಾನ
author img

By

Published : Jan 20, 2021, 5:29 PM IST

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಹಾಗೂ ಹಣಕಾಸು ಸಂಸ್ಥೆಗಳಿಂದ 200 ಕೋಟಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.

2020-21ನೇ ಸಾಲಿನಲ್ಲಿ ಭವಿಷ್ಯ ನಿಧಿ ನ್ಯಾಸ ಮಂಡಳಿಯ ಬಾಕಿ ಮೊತ್ತ ಪಾವತಿಸಲು 200 ರೂ. ಕೋಟಿ ದೀರ್ಘಾವದಿ ಸಾಲವನ್ನು 7 ವರ್ಷಗಳ ಅವಧಿಗೆ ಸಂಸ್ಥೆ ಪಡೆಯಲಿದೆ. ಆಸಕ್ತಿ ಹೊಂದಿದ ಬ್ಯಾಂಕ್, ವಾಣಿಜ್ಯ ಹಾಗೂ ಹಣಕಾಸು ಸಂಸ್ಥೆಗಳು ಮುಚ್ಚಿದ ಲಕೋಟೆಯಲ್ಲಿ ಅರ್ಜಿಯನ್ನು ದಿನಾಂಕ 19/02/2021ರಂದು ಮಧ್ಯಾಹ್ನ 3 ಗಂಟೆಯೊಳಗೆ ಗೋಕುಲ ರಸ್ತೆಯ ಕೇಂದ್ರ ಕಚೇರಿಗೆ ಸಲ್ಲಿಸಬೇಕು‌. ಅದೇ ದಿನ 4 ಗಂಟೆಗೆ ಲಕೋಟೆಯನ್ನು ತೆರೆಯಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ ಸೈಟ್ www.nwksrtc.in ಹಾಗೂ ಮೊಬೈಲ್ ಸಂಖ್ಯೆ 7760991527, 7760991512 ಸಂಪರ್ಕಿಸಬಹುದು ಎಂದು ಮುಖ್ಯ ಲೆಕ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.