ಹುಬ್ಬಳ್ಳಿ: ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ನಾಗರಾಜ್ ಛಬ್ಬಿ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ದೆಹಲಿಯಲ್ಲಿಂದು ಪಕ್ಷ ಸೇರ್ಪಡೆಯಾದರು.
ನಾಗರಾಜ್ ಛಬ್ಬಿ ಅವರಿಗೆ ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಮಾಜಿ ಸಚಿವ ಸಂತೋಷ ಲಾಡ್‌ಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಇದರಿಂದ ಬೇಸರಗೊಂಡ ಛಬ್ಬಿ ಕಾಂಗ್ರೆಸ್ ತೊರೆದಿದ್ದಾರೆ. ಇಂದು ಬೆಳಗ್ಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನಾಗರಾಜ ಛಬ್ಬಿ, ಈ ಹಿಂದಿನ ಚುನಾವಣೆಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆಗ ಡಾ.ಮಹೇಶ ನಾಲ್ವಾಡ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಮತ್ತೊಮ್ಮೆ ಪಶ್ಚಿಮದಿಂದ ಟಿಕೆಟ್‌ಗೆ ಪ್ರಯತ್ನ ಮಾಡಿದ್ದರು. ಕಲಘಟಗಿಯಿಂದ ಎರಡು ಬಾರಿ ಟಿಕೆಟ್ ವಂಚಿತರಾಗಿದ್ದರು. ಇದರಿಂದ ನೊಂದು ಇದೀಗ ಕಮಲ ಪಕ್ಷ ಸೇರಿದ್ದಾರೆ.
ಇದನ್ನೂಓದಿ: ಕಾಂಗ್ರೆಸ್‌ನಲ್ಲಿ ಚುನಾವಣೆಗೆ ಮುನ್ನ ಸಿಎಂ ಅಭ್ಯರ್ಥಿ ಘೋಷಿಸುವ ವಾಡಿಕೆ ಇಲ್ಲ: ಶಶಿ ತರೂರ್