ಹುಬ್ಬಳ್ಳಿ: ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನಾಗೇಶ ಕಲಬುರ್ಗಿ ನಗರಾಭಿವೃದ್ಧಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಬಳಿಕ ಮಾತನಾಡಿದ ಅವರು, ಹು-ಧಾ ಮಹಾನಗರದ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣ ಬದ್ಧನಾಗಿ ಶ್ರಮಿಸುತ್ತೇನೆ. ಬಿಜೆಪಿ ಮುಖಂಡರ ಹಾಗೂ ಸಾರ್ವಜನಿಕರ ಸಹಕಾರ ನನಗೆ ಈ ಸ್ಥಾನಕ್ಕೆ ಏರುವಂತೆ ಮಾಡಿದೆ. ಹು-ಧಾ ಮಹಾನಗರವನ್ನು ದೇಶದಲ್ಲಿಯೇ ಮಾದರಿ ನಗರವನ್ನಾಗಿ ಮಾಡಲು ಸಹೃದಯತೆಯಿಂದ ಶ್ರಮಿಸುವುದಾಗಿ ಭರವಸೆ ನೀಡಿದರು.
ನಾಗೇಶ ಕಲಬುರ್ಗಿಯವರಿಗೆ ಸಚಿವ ಜಗದೀಶ್ ಶೆಟ್ಟರ ಹೂ ಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು.