ಧಾರವಾಡ : ಜಿಲ್ಲೆಯಲ್ಲಿ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಸಿಡಿ ಕಾಲೇಜು ಮೈದಾನದಲ್ಲಿ ಜ.12ರಿಂದ 16ರವರೆಗೆ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
ವಿವಿಧ ರಾಜ್ಯಗಳಿಂದ 7 ಸಾವಿರಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದ್ದು ವಸತಿ ಸೌಕರ್ಯಕ್ಕಾಗಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ವಿವಿ ಕ್ಯಾಂಪಸ್ ಹಾಗೂ ಕೆಸಿಡಿ ಕಾಲೇಜು ಸೇರಿದಂತೆ ವಿವಿ ವ್ಯಾಪ್ತಿಯ ಕಾಲೇಜು, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಅಗ್ರಿಕಲ್ಚರ್ ಕಾಲೇಜು ಹಾಸ್ಟೆಲ್‌ಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.
ಜ.9 ರಿಂದ 17ರವರಗೆ ಮಾಡಿರುವ ರಜೆ ಘೋಷಣೆ ಎಲ್ಲ ಕಾಲೇಜಿಗೆ ಅನ್ವಯವಾಗವುದಿಲ್ಲ. ಬದಲಾಗಿ ಕವಿವಿ, ಕೆಸಿಡಿ ಕಾಲೇಜಿಗೆ ಮಾತ್ರ ಅನ್ವಯ ಆಗುತ್ತದೆ. ವಿವಿಧ ರಾಜ್ಯಗಳಿಂದ ಬರುವ ಜನರಿಗೆ ಸರ್ಕಾರ ಅವಕಾಶ ನೀಡಿದೆ ಎಂದು ಕುಲಪತಿ ಪ್ರೊ. ಕೆ.ಬಿ.ಗುಡಸಿ ಹೇಳಿದರು.
ಇದನ್ನೂ ಓದಿ: ಯುವಜನೋತ್ಸವ ಕಾರ್ಯಕ್ರಮಕ್ಕೆ ಮೋದಿ ಆಗಮನ.. ನಟ ಅಕ್ಷಯ್ ಕುಮಾರ್ಗೆ ಸಚಿವ ಜೋಶಿ ಕರೆ