ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಕೆಲವು ದಿನಗಳ ಹಿಂದೆ ಸ್ಪೋಟಕ ವಸ್ತುವೊಂದು ಪತ್ತೆಯಾಗಿ ಜನರಲ್ಲಿ ಭಯವನ್ನುಂಟು ಮಾಡಿತ್ತು. ಇದರ ಬೆನ್ನಲ್ಲೇ ಭದ್ರತೆ ನಿಯೋಜನೆ ಮಾಡುವುದಾಗಿ ಕೂಡ ಅಧಿಕಾರಿಗಳು ತಿಳಿಸಿದ್ದರು. ಆದರೆ, ನಿಲ್ದಾಣದಲ್ಲಿ ಸೂಕ್ತ ಭದ್ರತೆ ಇಲ್ಲದೆ ನಾಯಿಗಳೆಲ್ಲ ರಾಜಾ ರೋಷವಾಗಿ ಓಡಾಡುತ್ತಿವೆ.
ರಾಜ್ಯ ಹಾಗೂ ದೇಶದೆಲ್ಲೆಡೆ ಸ್ಫೋಟಕ ವಸ್ತುಗಳ ಹಾಗೂ ಬಾಂಬ್ ಪತ್ತೆ ಪ್ರಕರಣಗಳು ನಡೆದರೂ ಕೂಡ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ನೈಋತ್ಯ ರೈಲ್ವೆ ವಲಯದ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಏನಾದ್ರೂ ಅನಾಹುತಕಾರಿ ಘಟನೆಗಳು ನಡೆದ್ರೆ ಯಾರು ಹೊಣೆ ಎಂಬ ಪ್ರಶ್ನೆ ಕಾಡುತ್ತಿದೆ. ಇನ್ನು ಮುಂದಾದರೂ ಕೂಡ ರೈಲ್ವೆ ನಿಲ್ದಾಣದಲ್ಲಿ ಮೆಟಲ್ ಡಿಟೆಕ್ಟರ್ ನಂತಹ ಉಪಕರಣ ಅಳವಡಿಸುವುದರ ಜೊತೆಗೆ ಹೆಚ್ಚಿನ ಭದ್ರತೆ ಒದಗಿಸಬೇಕಿದೆ.