ಹುಬ್ಬಳ್ಳಿ: ಕಿಮ್ಸ್ನಲ್ಲಿ ಸಾವನ್ನಪ್ಪಿದ ಧಾರವಾಡದ ವ್ಯಕ್ತಿಯ ವರದಿ ನೆಗೆಟಿವ್ ಬಂದಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಸ್ಪಷ್ಟಪಡಿಸಿದ್ದಾರೆ.
ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿಯಾಗಿದ್ದ ಈತ ಜ್ವರ, ನೆಗಡಿ, ಕೆಮ್ಮು, ನ್ಯೂಮೋನಿಯಾದಿಂದಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ.
ಈತನಿಗೆ ಕೊರೊನಾ ಸೋಂಕು ತಗುಲಿರುವ ಅನುಮಾನದ ಹಿನ್ನಲೆ ವ್ಯಕ್ತಿಯ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ಶಿವಮೊಗ್ಗ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ನಿಂದ ನೆಗೆಟಿವ್ ವರದಿ ಬಂದಿದ್ದು, ಜಾಂಡಿಸ್ ನಿಂದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಸ್ಪಷ್ಟಪಡಿಸಿದ್ದಾರೆ.