ETV Bharat / state

ಧಾರವಾಡದಲ್ಲಿ ಕೋವಿಡ್​ ಅಬ್ಬರ.. ಎಸ್​ಡಿಎಮ್​​​ ಕಾಲೇಜಿನ ಓಪಿಡಿ, ಹೊಸ ರೋಗಿಗಳ ಎಂಟ್ರಿಗೆ ನಿರ್ಬಂಧ - ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಮಾಹಿತಿ

ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಕೋವಿಡ್‌ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಠಿಣ ಕ್ರಮಗಳನ್ನು ಮುಂದುವರೆಸಲಾಗಿದ್ದು, ಡಿ.01ರವರೆಗೆ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಮಾಹಿತಿ ನೀಡಿದ್ದಾರೆ.

DCNitesh Patil, SD College
ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್, ಎಸ್​ಡಿಎಮ್​ ಕಾಲೇಜು
author img

By

Published : Nov 28, 2021, 3:52 PM IST

Updated : Nov 28, 2021, 4:19 PM IST

ಧಾರವಾಡ: ಇಲ್ಲಿನ ಸತ್ತೂರು ಬಡಾಣೆಯಲ್ಲಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್​ ನಿಯಂತ್ರಣಕ್ಕೆ ಕೈಗೊಂಡಿರುವ ಬಿಗಿ ಕ್ರಮಗಳನ್ನು ಮುಂದುವರೆಸಲಾಗಿದೆ. ಈ ನಿಟ್ಟಿನಲ್ಲಿ ಡಿ.01ರವರೆಗೆ ಆಸ್ಪತ್ರೆಯ ಓಪಿಡಿ ಹಾಗೂ ಹೊಸ ರೋಗಿಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್​ ಹೇಳಿದರು.

ಮಾಹಿತಿ ನೀಡಿದ ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್

ಇಂದು ಜಿಲ್ಲಾಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಈ ಕುರಿತಂತೆ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್​ಡಿಎಮ್​ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಡಿ.01ರವರೆಗೆ ಓಪಿಡಿ ವ್ಯವಸ್ಥೆ ಇರುವುದಿಲ್ಲ. ಹೊರ ಜಿಲ್ಲೆಗಳಿಂದ ಹುಬ್ಬಳ್ಳಿ-ಧಾರವಾಡಕ್ಕೆ ಚಿಕಿತ್ಸೆಗಾಗಿ ಬರುವ ರೋಗಿಗಳು ಕಿಮ್ಸ್ ಅಥವಾ ಜಿಲ್ಲಾಸ್ಪತ್ರೆಗೆ ತೆರಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇದೇ ವೇಳೆ ಕೋವಿಡ್ ವೈರಾಣುವಿನ ಜಿನೋಮ್ ಸೀಕ್ವೆನ್ಸ್​ ವರದಿಗಳು ಬುಧವಾರ ಕೈ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಎಸ್‌ಡಿಎಂ ಕಾಲೇಜಿಗೆ ಭೇಟಿ ನೀಡಿದ ಸಚಿವರು:

ಕಾಲೇಜಿನಲ್ಲಿ ಕೊರೊನಾ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಭೇಟಿ ನೀಡಿ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಎಸ್​​ಡಿಎಮ್​ ಕಾಲೇಜಿಗೆ ಭೇಟಿ ನೀಡಿದ ಸಚಿವರು

ಪರಿಶೀಲನೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್​​ಡಿಎಂ‌ನಲ್ಲಿ 306 ಜನರಿಗೆ ಸೋಂಕು ತಗುಲಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದ್ದು, ಯಾರು ಹೆದರುವ ಅವಶ್ಯಕತೆ ಇಲ್ಲ. ಆಸ್ಪತ್ರೆಯ ಸುಮಾರು 500 ಮೀಟರ್ ವ್ಯಾಪ್ತಿಯಲ್ಲಿ ಕಂಟೈನ್​ಮೆಂಟ್​​ ಝೋನ್ ಹೇರಲಾಗಿದ್ದು, ಜನರ ತಪಾಸಣೆ ಮಾಡಲಾಗುತ್ತಿದೆ ಎಂದರು.

ಕಳೆದ ಕೆಲ ದಿನಗಳ ಹಿಂದೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳ ಪೋಷಕರು ಆಗಮಿಸಿದ್ದರು. ಯಾರಿಂದ ಸೋಂಕು ಬಂದಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಈ ಬಗ್ಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಈ ವೇಳೆ ಸಚಿವರಿಗೆ ಶಾಸಕ ಅರವಿಂದ ಬೆಲ್ಲದ ಸಾಥ್ ನೀಡಿದರು.

ಇದನ್ನೂ ಓದಿ: ಧಾರವಾಡ ಎಸ್‌ಡಿಎಂ ಕಾಲೇಜಿನಲ್ಲಿ ಕೋವಿಡ್‌ ಅಬ್ಬರ: ಪರೀಕ್ಷೆ ಹೆಚ್ಚಿಸಲು ಸರ್ಕಾರ ಸೂಚನೆ

Last Updated : Nov 28, 2021, 4:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.