ಧಾರವಾಡ: ಮಹಾನಗರದ ನೂತನ ಪೊಲೀಸ್ ಆಯುಕ್ತರಾಗಿ ಆರ್.ದಿಲೀಪ್ ಇಂದು ಅಧಿಕಾರ ಸ್ವೀಕರಿಸಿದರು.
ಪೊಲೀಸ್ ಆಯುಕ್ತರಾಗಿದ್ದ ಎಂ.ಎನ್.ನಾಗರಾಜ ಅವರು ನೂತನ ಕಮೀಷನರ್ ದಿಲೀಪ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇದೇ ವೇಳೆ ಅಧಿಕಾರ ಸ್ವೀಕರಿಸಿದ ಆರ್.ದಿಲೀಪ್, ಡೆಪ್ಯೂಟಿ ಐಜಿಪಿಯಾಗಿ ಬಡ್ತಿ ಹೊಂದಿದ ಎಂ.ಎನ್.ನಾಗರಾಜ ಅವರಿಗೆ ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ಗೆ ಹೊಸ ಸಾರಥಿಯಾಗಿ ಆರ್.ದಿಲೀಪ್ ಅಧಿಕಾರ ಸ್ವೀಕರಿಸಿದ್ದು, ಈ ಮೊದಲು ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಆಗಿ ಹಾಗೂ ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.