ಹುಬ್ಬಳ್ಳಿ: ಮಹದಾಯಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಸ್ವಾಗತಾರ್ಹವಾಗಿದೆ. ನಾಲ್ಕು ದಶಕದ ರೈತರ ಹೋರಾಟಕ್ಕೆ ಸಿಹಿ ಸುದ್ದಿ ಸಿಕ್ಕಿದೆ ಎಂದು ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ಹೇಳಿದರು.
ಮಹದಾಯಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಸೂಚನೆ ಹೊರಡಿಸಿದ ಕೂಡಲೇ ರಾಜ್ಯ ಸರ್ಕಾರ ತಾಂತ್ರಿಕವಾಗಿ ಸಿದ್ಧವಾಗಬೇಕು. ಕಳಸಾ ಬಂಡೂರಿ ಯೋಜನೆ ಕಾಮಗಾರಿಗೆ ಯಾವುದೇ ಸಮಸ್ಯೆ ಇಲ್ಲ. ಶೀಘ್ರವೇ ರಾಜ್ಯ ಸರ್ಕಾರ ಕಾಮಗಾರಿ ಕೈಗೊಳ್ಳಬೇಕು ಎಂದರು.
ಬಹಳ ದಿನದ ಕನಸು ನನಸಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಅಭಿನಂದನೆ ಸಲ್ಲಿಸುತ್ತೆನೆ ಎಂದರು. ಇನ್ನು ಪತ್ರಿಕಾ ಭವನದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.