ಹುಬ್ಬಳ್ಳಿ: ಬಸ್ ವ್ಯವಸ್ಥೆ ಇಲ್ಲದ ಹಿನ್ನೆಲೆ ವಿದ್ಯಾರ್ಥಿಗಳು ಎತ್ತಿನ ಗಾಡಿಯಲ್ಲಿ SSLC ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಕುಂದಗೋಳ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಇಂದಿನ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ.
ಕೋವಿಡ್ ಭೀತಿ ಮಧ್ಯೆಯೂ ರಾಜ್ಯಾದ್ಯಂತ ಸೋಮವಾರದಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಆದ್ರೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಕುಂದಗೋಳ ತಾಲೂಕಿನ ಯರಗುಪ್ಪಿಯ ವಿದ್ಯಾರ್ಥಿಗಳು ರೊಟ್ಟಿಗವಾಡ ಪರೀಕ್ಷಾ ಕೇಂದ್ರಕ್ಕೆ ಎತ್ತಿನ ಗಾಡಿ ಕಟ್ಟಿಕೊಂಡು ಹೋಗಿ ಪರೀಕ್ಷೆ ಬರೆದಿದ್ದಾರೆ.
ಸರಿಯಾದ ಸಾರಿಗೆ ವ್ಯವಸ್ಥೆ ಮಾಡದೇ ಬೇಕಾಬಿಟ್ಟಿಯಾಗಿ ಮಕ್ಕಳ ಭವಿಷ್ಯದ ಬಗ್ಗೆ ನಿಷ್ಕಾಳಜಿ ತೋರುತ್ತಿರುವ ಸರ್ಕಾರದ ವಿರುದ್ಧ ಸಾರ್ವಜನಿಕರು ಹಿಡಿಶಾಪ ಹಾಕಿದ್ದಾರೆ. ರಾಜ್ಯಾದ್ಯಂತ ಇಂದು ಕೂಡ ಪರೀಕ್ಷೆಗಳು ನಡೆಯಲಿವೆ. (ಪರೀಕ್ಷೆಗೆ ಹೆದರಿ ಮನೆಯಲ್ಲೇ ಕುಳಿತಿದ್ದ ಬಾಲಕಿ.. ವಿದ್ಯಾರ್ಥಿನಿಯ ಮನವೊಲಿಸಿ SSLC Exam ಬರೆಸಿದ ಬಿಇಒ)