ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದ ಫಾತಿಮಾ ಹೈಸ್ಕೂಲ್‌ನಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪರ ಅಲೆಯಿದೆ. ಕೇಂದ್ರದಲ್ಲಿನ ಮೋದಿ ಸರ್ಕಾರ ದಿಟ್ಟತನದ ನಿರ್ಧಾರಗಳನ್ನ ಪದವೀಧರರು ಗುರುತಿಸಿದ್ದಾರೆ ಎಂದರು.
ಖಾಸಗಿ ಹೋಟೆಲ್ನಲ್ಲಿ ನಿನ್ನೆ ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಗೂ ಮಸ್ಕಿ ಚುನಾವಣೆ ಬಗ್ಗೆ ಬಿಜೆಪಿ ನಾಯಕರ ಸಭೆ ಮಾಡಿದ್ದೇವೆ. ಮಸ್ಕಿ ಕ್ಷೇತ್ರದಲ್ಲಿ ಚುನಾವಣೆ ಬಗ್ಗೆ ಚರ್ಚಿಸಿದ್ದೇವೆ. ಬೆಳಗಾವಿಯ ನಾಯಕರು ತಮ್ಮ ಬೆಂಬಲಿಗರನ್ನು ಡಿಸಿಸಿ ಬ್ಯಾಂಕ್‌ಗೆ ಸ್ಪರ್ಧೆ ಮಾಡಿಸಿದ್ದಾರೆ. ಹೀಗಾಗಿ ಗೊಂದಲ ಸೃಷ್ಟಿಯಾಗಬಾರದು ಎಂಬ ನಿಟ್ಟಿನಲ್ಲಿ ಅವರೆಲ್ಲರೂ ಒಂದಾಗಿ ಚುನಾವಣೆ ಎದುರಿಸಬೇಕೆಂದು ತಿಳಿಸಿದ್ದೇವೆ ಎಂದರು.
ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ನಡೆದಿಲ್ಲ. ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆ ಇಲ್ಲ. ಸಿಎಂ ಕುರ್ಚಿ ಖಾಲಿಯಿಲ್ಲ ಎಂದರು.