ETV Bharat / state

ಡಿಕೆಶಿ ಸಿದ್ದರಾಮಯ್ಯನವರ ಮಧ್ಯೆ ಹೊಂದಾಣಿಕೆ ಇಲ್ಲ ಎನ್ನುವುದು ಜಗತ್ತಿಗೆ ಗೊತ್ತಿದೆ: ಪ್ರಲ್ಹಾದ್ ಜೋಶಿ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ

ಕೇಂದ್ರ ಸಂಪುಟ ವಿಸ್ತರಣೆ ವಿಚಾರ ಪ್ರಧಾನಮಂತ್ರಿಗಳ ಅರಿವಿಗೆ ಬಿಟ್ಟಿದ್ದು, ಅದರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ..

joshi
joshi
author img

By

Published : Jun 28, 2021, 8:21 PM IST

ಹುಬ್ಬಳ್ಳಿ : ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಹೀಗಾಗಿ, ಅಧಿಕಾರಕ್ಕೆ ಸಂಬಂಧಿಸಿದಂತೆ ಸಣ್ಣ ಸಣ್ಣ ಮನಸ್ತಾಪ ಹುಟ್ಟುವುದು ಸಾಮಾನ್ಯ. ಆದರೆ, ಕಾಂಗ್ರೆಸ್ ಅಧಿಕಾರ ಇಲ್ಲದೇ ಕಚ್ಚಾಟ ನಡೆಸುತ್ತಿದೆ. ಅವರಿಗೆ ಬುದ್ಧಿ ಇಲ್ವಾ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿಂದು ನೈಸರ್ಗಿಕ ವಿಕೋಪದಿಂದ ಜೀವಹಾನಿ ಉಂಟಾದ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಪ್ರಲ್ಹಾದ್ ಜೋಶಿ ವ್ಯಂಗ್ಯ

ಡಿಕೆಶಿ-ಸಿದ್ದರಾಮಯ್ಯನವರ ಮಧ್ಯೆ ಹೊಂದಾಣಿಕೆ ಇಲ್ಲ ಎನ್ನುವುದು ಜಗತ್ತಿಗೆ ಗೊತ್ತಿರುವ ವಿಷಯ. ಅಧಿಕಾರ ಇಲ್ಲದೇ ಸಿಎಂ ಗಾದಿ ಬಗ್ಗೆ ಕನಸು ಕಾಣುವುದು ಹಾಸ್ಯಾಸ್ಪದ. ಅವರ ಬುದ್ಧಿಗೆ ಏನು ಅನ್ನಬೇಕು? ದೇಶದಲ್ಲಿ ಕಾಂಗ್ರೆಸ್ ಈಗಿನ ಪರಿಸ್ಥಿತಿ ನೋಡಿದ್ರೆ ಅಧಿಕಾರಕ್ಕೆ ಬರಲು ಸಾಧ್ಯನಾ ಎಂದು ಪ್ರಶ್ನೆ ಮಾಡಿದರು.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಕೇಂದ್ರ ಸಂಪುಟ ವಿಸ್ತರಣೆ ವಿಚಾರ ಪ್ರಧಾನಮಂತ್ರಿಗಳ ಅರಿವಿಗೆ ಬಿಟ್ಟಿದ್ದು, ಅದರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಈಗಾಗಲೇ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.