ETV Bharat / state

ಧಾರವಾಡದಲ್ಲಿ ಡೆಲ್ಟಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ಡಿಸಿ ಸ್ಪಷ್ಟನೆ - ಹುಬ್ಬಳ್ಳಿ ಕಿಮ್ಸ್

ಧಾರವಾಡದಲ್ಲಿ ಕೋವಿಡ್​ ಟೆಸ್ಟಿಂಗ್ ಯಥಾ ಸ್ಥಿತಿಯಲ್ಲಿ ಕಾಪಾಡಿಕೊಂಡಿದ್ದೇವೆ, ಆದರೆ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಅಲ್ಲದೆ 3ನೇ ಅಲೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
author img

By

Published : Jun 24, 2021, 3:37 PM IST

ಧಾರವಾಡ: ಜಿಲ್ಲೆಯಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಅನ್​​ಲಾಕ್ ಆದ ಮೇಲೆ ಜನರ ಓಡಾಟ ಹೆಚ್ಚಾಗಿದೆ, ಇನ್ನೂ ಜೀರೋ ಪಾಸಿಟಿವಿಟಿ ಆಗಿಲ್ಲ ಜನರು ಜಾಗರೂಕತೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

ಧಾರವಾಡದಲ್ಲಿ ಡೆಲ್ಟಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ಡಿಸಿ ಸ್ಪಷ್ಟನೆ

3ನೇ ಅಲೆಯ ಬಗ್ಗೆ ಜಿಲ್ಲಾಡಳಿತ ತಯಾರಿ ಮಾಡಿಕೊಳ್ಳುತ್ತಿದೆ. ಮಕ್ಕಳಿಗಾಗಿ ಜಿಲ್ಲಾಸ್ಪತ್ರೆಯಲ್ಲಿ 125 ಬೆಡ್​​​ಗಳ ವ್ಯವಸ್ಥೆ ಮಾಡಲಾಗಿದೆ.‌ ಹುಬ್ಬಳ್ಳಿ ಕಿಮ್ಸ್ ನಲ್ಲಿ ಸಹ ವ್ಯವಸ್ಥೆ ಮಾಡಲಾಗಿದೆ ಎಂದರು. ಇನ್ನು 6- 8 ವಾರಗಳ ಬಳಿಕ 3ನೇ ಅಲೆ ಬರಲಿದೆ ಎಂದು ಹೇಳಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಈಗಲೇ ಸಿದ್ಧತೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬ್ಲ್ಯಾಕ್ ಪಂಗಸ್ ರೋಗಿಗಳಿಗೆ ಕಿಮ್ಸ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ಓದಿ: ರಾಜ್ಯದಲ್ಲಿ Delta ಪ್ಲಸ್ ರೋಗದಿಂದ ವ್ಯಕ್ತಿ ಸಂಪೂರ್ಣ ಗುಣಮುಖ: ಮುಖ್ಯ ಆಯುಕ್ತ ಗೌರವ್​ ಗುಪ್ತಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.