ETV Bharat / state

ಹುಬ್ಬಳ್ಳಿ ರೈಲ್ವೆ ನಿಲ್ದಾಣದ ನಾಡ ಬಾಂಬ್ ಸ್ಫೋಟ ಕೇಸ್‌ : 2 ವರ್ಷವಾದರೂ ಸಿಕ್ಕಿಲ್ಲ ಸಾಕ್ಷಿ, ಪುರಾವೆ! - ಹುಬ್ಬಳ್ಳಿ ರೈಲು ನಿಲ್ದಾಣದ ಬಾಂಬ್ ಸ್ಫೋಟ ಪ್ರಕರಣ

2019ರ ಅಕ್ಟೋಬರ್ 21ರಂದು ಹುಬ್ಬಳ್ಳಿ-ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು. ಇದರಲಿದ್ದ ಒಂದು ಬಾಂಬ್ ಸ್ಪೋಟಗೊಂಡ ಪರಿಣಾಮ ಚಹಾ ಮಾರುವ ಕಾರ್ಮಿಕ ಹುಸೇನಸಾಬ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..

ಎರಡು ವರ್ಷವಾದರೂ ಇತ್ಯರ್ಥವಾಗದ ಬಾಂಬ್ ಸ್ಫೋಟ ಪ್ರಕರಣ

author img

By

Published : Nov 17, 2021, 5:12 PM IST

ಹುಬ್ಬಳ್ಳಿ : ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಫೋಟ ಪ್ರಕರಣ. ಎರಡು ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ, ಪುರಾವೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ಹಳಿ ತಪ್ಪಿದೆಯೇ ಎನ್ನುವ ಅನುಮಾನ ಕಾಡತೊಡಗಿದೆ.

ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್‌ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ.

ಅಲ್ಲದೇ ಪ್ರಕರಣದಲ್ಲಿ ಆರೋಪಿಗಳನ್ನು ತಾತ್ಕಾಲಿಕವಾಗಿ ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ.

ಘಟನೆಯ ವಿವರ : ಪೊಲೀಸರು ಹುಬ್ಬಳ್ಳಿಯ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ‘ಸಿ ರಿಪೋರ್ಟ್’ ಸಲ್ಲಿಸಿದ್ದಾರೆ. 2019ರ ಅಕ್ಟೋಬರ್ 21ರಂದು ಹುಬ್ಬಳ್ಳಿ-ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು.

ಇದರಲಿದ್ದ ಒಂದು ಬಾಂಬ್ ಸ್ಪೋಟಗೊಂಡ ಪರಿಣಾಮ ಚಹಾ ಮಾರುವ ಕಾರ್ಮಿಕ ಹುಸೇನಸಾಬ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸ್ಫೋಟಗೊಂಡ ಸ್ಥಳಕ್ಕೆ ಅಂದಿನ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಮತ್ತಿತರರು ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು. ಯಾವುದೇ ಸಾಕ್ಷಿ, ಪುರಾವೆ, ಆರೋಪಿಗಳು ಪತ್ತೆಯಾಗದ ಕಾರಣ ರೈಲ್ವೆ ಪೊಲೀಸರು 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದಾರೆ.

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಅಂಶವೇನೆಂದರೆ, ವಿಜಯವಾಡದಿಂದ ಹುಬ್ಬಳ್ಳಿಗೆ ಬಂದಿದ್ದ ಅಮರಾವತಿ ಎಕ್ಸ್‌ಪ್ರೆಸ್ ರೈಲು 4ನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಎಲ್ಲ ಪ್ರಯಾಣಿಕರು ಇಳಿದ ಬಳಿಕ ಸ್ವಚ್ಛತಾ ಕಾರ್ಮಿಕನೊಬ್ಬನಿಗೆ 8 ಲಿಂಬೆ ಹಣ್ಣಿನ ಗಾತ್ರದ ಕಚ್ಚಾ ಬಾಂಬ್‌ಗಳಿದ್ದ ಬಕೆಟ್ ಸಿಕ್ಕಿತ್ತು.

ಈ ಬಕೆಟ್‌ ಮೇಲೆ ‘ಪ್ರಕಾಶ ಅಭಿತ್ಕರ್, ಕೊಲ್ಲಾಪುರ ಎಂಎಲ್‌ಎ, ಗುರಗೋಟಿ, ‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’ ಎಂದು ಬರೆಯಲಾಗಿತ್ತು. ಸಂಶಯಾಸ್ಪದ ಬಕೆಟ್ ಕಂಡ ಕೂಡಲೇ ಕಾರ್ಮಿಕ ಸ್ಥಳದಲ್ಲಿದ್ದ ಆರ್‌ಪಿಎಫ್ ಪೇದೆ ರವಿ ರಾಠೋಡ್‌ರಿಗೆ ಮಾಹಿತಿ ನೀಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.