ETV Bharat / state

ಕಾಂಗ್ರೆಸ್ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್ - ಮಧು ಬಂಗಾರಪ್ಪ ನ್ಯೂಸ್​

ದಿ.ಎಸ್.ಬಂಗಾರಪ್ಪ ನನ್ನ ರಾಜಕೀಯ ಗುರು. ಅವರ ಪುತ್ರ ಮಧು ಬಂಗಾರಪ್ಪ ಅವರನ್ನು ತಮ್ಮ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವುದು ಖುಷಿ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

DK Shivakumar
ಡಿ.ಕೆ. ಶಿವಕುಮಾರ್
author img

By

Published : Jul 30, 2021, 2:43 PM IST

ಹುಬ್ಬಳ್ಳಿ: ಕಾಂಗ್ರೆಸ್​ ಪಕ್ಷವನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷವು ಮತ್ತೆ ಪುಟಿದೆದ್ದು ದೇಶ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಗರದ ಗೋಕುಲ ಗಾರ್ಡ್​ನಲ್ಲಿ ಮಧು ಬಂಗಾರಪ್ಪ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಅವರು, ಬಂಗಾರಪ್ಪ ನನ್ನ ರಾಜಕೀಯ ಗುರು. ಅವರ ಗರಡಿಯಲ್ಲಿ ನಾವು ಬೆಳೆದವರು. ಅವರ ಪುತ್ರನನ್ನು ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವುದು ಖುಷಿ ತಂದಿದೆ. ಮಧು ಬಂಗಾರಪ್ಪ ಅವರು ವ್ಯಕ್ತಿ ಅಲ್ಲ, ಅವರೊಬ್ಬ ಶಕ್ತಿಯಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್

ಎಸ್.ಬಂಗಾರಪ್ಪ ಸಿಎಂ ಆಗಿದ್ದಾಗ ರಾಜ್ಯದ ಜನತೆಗೆ ತಲುಪುವ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಬಂಗಾರಪ್ಪನವರ ದೊಡ್ಡ ಸಂಖ್ಯೆಯ ಅನುಯಾಯಿಗಳು ರಾಜ್ಯಾದ್ಯಂತ ಇದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷ ಸೇರಿಸುವ ಕೆಲಸವನ್ನು ಮಧು ಬಂಗಾರಪ್ಪನವರು ಮಾಡಬೇಕು ಎಂದರು.

ಇನ್ನು ಕಾಂಗ್ರೆಸ್ ವಿಭಾಗಮಟ್ಟದಲ್ಲಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಾರ್ಯಕರ್ತರು ಪ್ರತಿದಿನ ಹೊಸಬರನ್ನು ಪಕ್ಷಕ್ಕೆ ಸೇರ್ಪಡೆ ಮಾಡಬೇಕು. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗುರಿ 120 ಕ್ಷೇತ್ರ ಬದಲು 224 ಕ್ಷೇತ್ರ ಆಗಬೇಕು. ಎಲ್ಲರೂ ಪಕ್ಷಕ್ಕಾಗಿ ದುಡಿಯಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.