ಹುಬ್ಬಳ್ಳಿ: ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದೆ. ಈ ವಿಮಾನದಲ್ಲಿ ಉತ್ತರ ಕರ್ನಾಟಕ ಭಾಷೆ ಕಂಪು ಸೂಸಿದೆ. ಫ್ಲೈಟ್ ಅನೌನ್ಸ್ಮೆಂಟ್ಅನ್ನು ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾಡಿರುವುದು ತುಂಬಾ ವಿಶೇಷವಾಗಿದೆ.
ವಿಮಾನದಲ್ಲಿ ಭಾಷಾ ಸೊಗಡು: ಮೊದಲ ದಿನವೇ ಅಚ್ಚ ಕನ್ನಡದಲ್ಲಿ,"ಎಲ್ಲರಿಗೂ ನಮಸ್ಕಾರ್ ರೀ..ಶರಣು, ನಾನು ಅಕ್ಷಯ್ ಪಾಟೀಲ್.. ಇಲ್ಲೇ ಬೈಲಹೊಂಗಲದವ"! ಎಂದು ಪೈಲಟ್ ಉತ್ತರ ಕರ್ನಾಟಕ ಭಾಷೆಯಲ್ಲಿ ಅನೌನ್ಸ್ ಮಾಡಿದ್ದಾರೆ. ವಿಮಾನಗಳ ಹಾರಾಟಕ್ಕೂ ಮೊದಲು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಸೂಚನೆಗಳನ್ನು ನೀಡಲಾಗುತ್ತಿತ್ತು. ಅಂತದರಲ್ಲಿ ಕನ್ನಡ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಕೇಳುವುದು ಸಾಧ್ಯವಿರಲಿಲ್ಲ. ಬೈಲಹೊಂಗಲದ ಅಕ್ಷಯ ಪಾಟೀಲ್ ಇಂಡಿಗೋ ವಿಮಾನದ ಪೈಲಟ್ ಆಗಿದ್ದು, ತಮ್ಮ ಕನ್ನಡಾಭಿಮಾನವನ್ನು ಮೆರೆದಿದ್ದಾರೆ.
-
ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022 " class="align-text-top noRightClick twitterSection" data="
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQ
">ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQ
ಪೈಲಟ್ ಅಕ್ಷಯ್ ಪಾಟೀಲ್ ಕನ್ನಡದಲ್ಲಿ ಮಾತನಾಡುವ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೇರ್ ಮಾಡಿದ್ದಾರೆ. ಜೊತೆಗೆ ಹುಬ್ಬಳ್ಳಿ-ದೆಹಲಿ ವಿಮಾನಯಾನಕ್ಕೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಪೈಲಟ್ ಅಭಿನಂದಿಸಿದರು. ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ ಎಂದು ಅಕ್ಷಯ್ ಹೇಳಿದ್ರು.
ಇದನ್ನೂ ಓದಿ: ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಪುನಾರಂಭ.. ಕೇಂದ್ರ ಸಚಿವ ಜೋಶಿ ಚಾಲನೆ