ಹುಬ್ಬಳ್ಳಿ: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವಾಣಿಜ್ಯ ನಗರಿಯ ಕನ್ನಡ ಸಂಘಟನೆಗಳಲ್ಲಿ ಒಗ್ಗಟ್ಟಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ನಾಳೆಯ ಕರ್ನಾಟಕ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣದಿಂದ ಯಾವುದೇ ಬೆಂಬಲವಿಲ್ಲ ಎಂದು ಧಾರವಾಡ ಜಿಲ್ಲಾ ಕರವೇ ಜಿಲ್ಲಾಧ್ಯಕ್ಷ ಅಮೃತ ಇಜಾರೆ ಸ್ಪಷ್ಟಪಡಿಸಿದ್ದಾರೆ. ಸರೋಜಿನಿ ಮಹಿಷಿ ವರದಿಗೆ ಆಗ್ರಹಿಸಿ ನಾವು ನೈತಿಕ ಬೆಂಬಲ ಕೊಡುತ್ತೇವೆ ಹೊರತು ಯಾವುದೇ ರೀತಿಯಾಗಿ ಬಂದ್ ಮಾಡಿ ಪ್ರತಿಭಟನೆ ಮಾಡುವದಿಲ್ಲ ಎಂದರು.
ಆದ್ರೆ ಕರ್ನಾಟಕ ಸಂಗ್ರಾಮ ಸೇನೆ ನಾಳೆ ಬಂದ್ ಗೆ ಬೆಂಬಲ ನೀಡಿದ್ದು, ಬೆಳಗ್ಗೆ ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರ ಮೂಲಕ ಮಹಿಷಿ ವರದಿ ಜಾರಿಗೊಳಿಸುವಂತೆ ಮನವಿ ಸಲ್ಲಿಸಲಾಗುವದು ಎಂದು ಕರ್ನಾಟಕ ಸಂಗ್ರಾಮ ಸೇನೆ ಅಧ್ಯಕ್ಷ ಸಂಜು ದುಮ್ಮಕನಾಳ ತಿಳಿಸಿದರು.