ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಶುಶ್ರೂಷಕಿಯೊಬ್ಬರು ಗುರುವಾರ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಸದ್ಯ ಅರೆ ಪ್ರಜ್ಞಾವಸ್ಥೆಯಲ್ಲಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದುಬಂದಿಲ್ಲ. ಅವರಿಗೆ ಎಚ್ಚರ ಬಂದ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ವಿದ್ಯಾನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕೊರೊನಾ ವಾರಿಯರ್ಸ್ ಎಂದು ಗುರುತಿಸಿಕೊಂಡಿರುವ ನರ್ಸ್ ಆತ್ಮಹತ್ಯೆಗೆ ಯತ್ನಿಸಿರುವುದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.