ETV Bharat / state

NWKRTC ಹೊಸ ಪ್ರಯೋಗ: ನಗದುರಹಿತ ವ್ಯವಹಾರ ಉತ್ತೇಜಿಸಲು ಪ್ರಾಯೋಗಿಕವಾಗಿ UPI ಬಳಕೆ - ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಶಶಿಧರ ಕುಂಬಾರ

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಹೊಸ ಬಸ್​ ನಿಲ್ದಾಣದಲ್ಲಿ ಹಿರಿಯ ಅಧಿಕಾರಿಗಳು ಯುಪಿಐ ವ್ಯವಸ್ಥೆಗೆ ಚಾಲನೆ ನೀಡಿದರು.

ನಗದು ರಹಿತ ವ್ಯವಹಾರ ಉತ್ತೇಜಿಸಲು ಪ್ರಾಯೋಗಿಕವಾಗಿ ಯುಪಿಐ ಬಳಕೆ

author img

By ETV Bharat Karnataka Team

Published : Sep 1, 2023, 10:19 PM IST

ಹುಬ್ಬಳ್ಳಿ : ಸಾರ್ವಜನಿಕ ಸಾರಿಗೆಯನ್ನು ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು ಹಾಗೂ ನಗದು ರಹಿತ ವ್ಯವಹಾರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯುಪಿಐ ಮೂಲಕ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಮಾರ್ಗದರ್ಶನದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಪ್ರಯಾಣದ ಟಿಕೆಟ್ ಪಡೆಯುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.

ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ್​ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ನಗದುರಹಿತ ವ್ಯವಹಾರವನ್ನು ಉತ್ತೇಜಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಟಿಕೆಟ್ ಪಡೆಯಲು ನಗರದಲ್ಲಿ ನಗದುರಹಿತ ಹಣ ಪಾವತಿ ವ್ಯವಸ್ಥೆ ಆರಂಭಿಸಲಾಗಿದೆ. ಚಿಲ್ಲರೆ ಸಮಸ್ಯೆ ಪರಿಹಾರ, ಸಮಯದ ಉಳಿತಾಯ ಹಾಗೂ ಪ್ರಯಾಣದಲ್ಲಿ ನಗದು ತೆಗೆದುಕೊಂಡು ಹೋಗಬೇಕಾದ ಅವಶ್ಯಕತೆ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಹಾಗೂ ನಿರ್ವಾಹಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 4,830 ಬಸ್​ಗಳಿದ್ದು, 4,359 ಅನುಸೂಚಿಗಳ ಮೂಲಕ ಪ್ರತಿದಿನ 15 ಲಕ್ಷ ಕಿಲೋಮೀಟರ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಶಕ್ತಿ ಯೋಜನೆಗೆ ಮೊದಲು ನಿತ್ಯ 17.48 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಶಕ್ತಿ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷಕ್ಕೆ ಹೆಚ್ಚಳವಾಗಿದೆ ಎಂದರು.

ಆರಂಭದಲ್ಲಿ ಪ್ರಾಯೋಗಿಕವಾಗಿ ಹುಬ್ಬಳ್ಳಿ ಗ್ರಾಮಾಂತರ 3ನೇ ಡಿಪೋ ಬಸ್​ಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಇದರ ಸಾಧಕ-ಬಾಧಕಗಳು ಹಾಗೂ ಸಾರ್ವಜನಿಕ ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ, ಇತರೆ ಬಸ್​ಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಇಲಾಖೆ ಮುಖ್ಯಸ್ಥ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಹೆಚ್.ರಾಮನಗೌಡರ್​ ತಿಳಿಸಿದ್ದಾರೆ.

ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಶಶಿಧರ ಕುಂಬಾರ, ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಟಿ.ಎಲ್.ಶ್ರೀನಾಥ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

KSRTC ಉಪಕ್ರಮಗಳ ಅಧ್ಯಯನಕ್ಕೆ ಆಗಮಿಸಿದ ಉತ್ತರ ಪ್ರದೇಶ ನಿಯೋಗ: ಹೊಸ ಹೊಸ ಪ್ರಯೋಗಗಳು, ಡೀಸೆಲ್ ಜೊತೆ ಬಯೋಡೀಸೆಲ್ ವಾಹನ, ವಿದ್ಯುತ್ ವಾಹನ ಪರಿಚಯಿಸಿ ದೇಶದ ಅತ್ಯುತ್ತಮ ಸಾರಿಗೆ ನಿಗಮಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಕ್ರಮಗಳ ಅನುಷ್ಠಾನಗಳ ಅಧ್ಯಯನಕ್ಕೆ ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಆಗಮಿಸಿದೆ. ಎರಡು ದಿನಗಳ ಕಾಲ ಕೆಎಸ್ಆರ್​ಟಿಸಿಯ ಸಮಗ್ರ ಕಾರ್ಯಾಚರಣೆ, ನಿರ್ವಹಣಾ ವಿಧಾನವನ್ನು ಈ ತಂಡ ಅಧ್ಯಯನ ಮಾಡಿದೆ.

ಹೆಚ್ಚುವರಿ ವ್ಯವಸ್ಥಾಪಕ ನಿರ್ದೇಶಕಿ ಅನ್ನಪೂರ್ಣ ಗರ್ಗ್ ನೇತೃತ್ವದಲ್ಲಿ ಅಧಿಕಾರಿಗಳು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4, ಪ್ರಾದೇಶಿಕ ಕಾರ್ಯಾಗಾರ, ಕೆಂಗೇರಿ ಬಸ್ ನಿಲ್ದಾಣ, ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್‌ ಬಸ್‌ ನಿಲ್ದಾಣದ ನಿಯಂತ್ರಣ ಕೊಠಡಿಗಳಿಗೆ ಭೇಟಿ ನೀಡಿದರು.

ಇದನ್ನೂ ಓದಿ: ದೇಶದಲ್ಲೇ ಮಾದರಿ ಸಾರಿಗೆ ವ್ಯವಸ್ಥೆ: KSRTC ಉಪಕ್ರಮಗಳ ಅಧ್ಯಯನಕ್ಕೆ ಆಗಮಿಸಿದ ಉತ್ತರ ಪ್ರದೇಶ ನಿಯೋಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.