ETV Bharat / state

ಅನಧಿಕೃತ ಹಣ, ನಿರ್ಬಂಧಿತ ವಸ್ತುಗಳ ಸಾಗಾಣಿಕೆ ವಿರುದ್ಧ NWKRTC ಕಠಿಣ ಕ್ರಮ

author img

By

Published : Apr 5, 2023, 8:24 PM IST

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅನಧಿಕೃತ ಹಣ, ನಿರ್ಬಂಧಿತ ವಸ್ತುಗಳ ಸಾಗಾಣಿಕೆಗೆ NWKRTC ಕಠಿಣ ಕ್ರಮಕ್ಕೆ ಮುಂದಾಗಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಅನಧಿಕೃತವಾಗಿ ಹಣ, ನಿರ್ಬಂಧಿತ ವಸ್ತುಗಳ ಸಾಗಾಣಿಕೆಗೆ ಅವಕಾಶ ನೀಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರಿಗೆ ಸಿಬ್ಬಂದಿಗೆ ನಿರ್ದೇಶನಗಳನ್ನು ನೀಡಲಾಗಿದೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಖಾಸಗಿ ವಾಹನಗಳಂತೆ ಕೆಲವರು ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿಯೂ ಸಹ ಅನಧಿಕೃತವಾಗಿ ಹಣ ಹಾಗೂ ನಿರ್ಬಂಧಿತ ವಸ್ತುಗಳನ್ನು ಸಾಗಾಣಿಕೆ ಮಾಡುವ ಸಾಧ್ಯತೆಗಳಿರುತ್ತವೆ. ಅಂತಹ ಯಾವುದೇ ರೀತಿಯ ಕಾನೂನು ಬಾಹಿರ ಸಾಗಾಣಿಕೆಗೆ ಅವಕಾಶ ನೀಡದಂತೆ ಚಾಲಕರು, ನಿರ್ವಾಹಕರು, ಬಸ್ ನಿಲ್ದಾಣದ ಅಧಿಕಾರಿಗಳು ಹಾಗೂ ಕಾರ್ಗೋ ಕೌಂಟರ್​ಗಳ ಸಿಬ್ಬಂದಿ ಹೆಚ್ಚಿನ ಜಾಗೃತಿ ವಹಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಬಸ್ ನಿಲ್ದಾಣಗಳಲ್ಲಿರುವ ಕಾರ್ಗೋ ಕೌಂಟರ್ ಸಿಬ್ಬಂದಿ ಪ್ರಯಾಣಿಕರಹಿತ ಸರಕುಗಳನ್ನು ಬುಕ್ಕಿಂಗ್ ಮಾಡಿಕೊಳ್ಳುವಾಗ ಕೂಲಂಕಷ ತಪಾಸಣೆ ಮಾಡಬೇಕು. ನಿಲ್ದಾಣಾಧಿಕಾರಿಗಳು ನಿಯಮಿತವಾಗಿ ಹಾಗೂ ದಿಡೀರ್ ತಪಾಸಣೆ ಕೈಗೊಳ್ಳಬೇಕು. ಚಾಲಕರು ಹಾಗೂ ನಿರ್ವಾಹಕರು ಸಹ ಈ ಬಗ್ಗೆ ಸದಾ ಜಾಗೃತರಾಗಿಬೇಕು.

ಕೇಂದ್ರ ಕಚೇರಿಯಲ್ಲಿ ತನಿಖಾ ತಂಡಗಳ ನಿಯೋಜನೆ: ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ಮಾದರಿ ನೀತಿ ಸಂಹಿತೆಯ ನಿರ್ದೇಶನಗಳನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಕೇಂದ್ರ ಕಚೇರಿ ಹಾಗೂ ವಿಭಾಗ ಮಟ್ಟದಲ್ಲಿ ತನಿಖಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಒಂದೇ ದಿನ 2 ಕೋಟಿ 73 ಲಕ್ಷ ರೂಪಾಯಿ ಜಪ್ತಿ- ಡಿಸಿ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.