ETV Bharat / state

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ಬ್ರೇಕ್​: ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಧಾರವಾಡದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬ್ರೇಕ್​ ಹಾಕಿದ ಅಧಿಕಾರಿಗಳು ಬಾಲಕಿಯನ್ನ ರಕ್ಷಣೆ ಮಾಡಿದ್ದಾರೆ.

​ಧಾರವಾಡದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬ್ರೇಕ್​ ಹಾಕಿದ ಅಧಿಕಾರಿಗಳು
author img

By

Published : May 16, 2019, 4:42 PM IST

ಧಾರವಾಡ: ತಾಲೂಕಿನ ಬೋಗೂರ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹ ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

DWD
ಧಾರವಾಡದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ಬ್ರೇಕ್​ ಹಾಕಿದ ಅಧಿಕಾರಿಗಳು

ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ ಶಂಕರ ಅಣ್ಣಿಗೇರಿ ಎಂಬ ಯುವಕನಿಗೆ ವಿವಾಹ ನಿಶ್ಚಯ ಮಾಡಲಾಗಿತ್ತು. ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಲಾಗುತ್ತಿದೆ ಎಂದು ಮಕ್ಕಳ ಸಹಾಯವಾಣಿಯಿಂದ ಮಾಹಿತಿ ತಿಳಿದ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ , ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಗ್ರಾಮೀಣ ಪೊಲೀಸ್ ಠಾಣೆ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೂಲಕ ಮದುವೆ ಮನೆಗೆ ಭೇಟಿ ನೀಡಿ ನಡೆಯ ಬಹುದಾಗಿದ್ದ ಬಾಲ್ಯ ವಿವಾಹ ತಡೆ ಹಿಡಿದಿದ್ದಾರೆ.

ಮದುವೆ ಮನೆಯಲ್ಲಿ ನೆರೆದಿದ್ದ ಜನರಿಗೆ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ 2016 ಬಗ್ಗೆ ತಿಳಿಸಿ ಬಾಲಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಬಾಲಕಿಯನ್ನು ಹುಬ್ಬಳ್ಳಿಯ ನವ ನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ತಾತ್ಕಾಲಿಕ ರಕ್ಷಣೆಗಾಗಿ ಇರಿಸಲಾಗಿದ್ದು, ಎರಡೂ ಕುಟುಂಬದವರಿಗೆ ಪ್ರಾಥಮಿಕ ಹಂತದ ವಿಚಾರಣೆಗಾಗಿ ನಾಳೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ.

Intro:ಧಾರವಾಡ: ತಾಲೂಕಿನ ಬೋಗೂರ ಗ್ರಾಮದ 1೬ ವರ್ಷದ ಅಪ್ರಾಪ್ತ ಬಾಲಕಿಯ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಧಾರವಾಡ ತಾಲೂಕಿನ ಸೋಮಾಪೂರ ಗ್ರಾಮದ ಶಂಕರ ಅಣ್ಣಿಗೇರಿ ೨೮ ಎಂಬ ಯುವಕನಿಗೆ ವಿವಾಹ ನಿಶ್ಚಯ ಮಾಡಲಾಗಿತ್ತು. ಮಕ್ಕಳ ಸಹಾಯವಾಣಿ ಯಿಂದ ಮಾಹಿತಿ ತಿಳಿದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಕರೆಪ್ಪ ಕೌಜಲಗಿ. ಮಹಮ್ಮದಲಿ ತಹಶಿಲ್ದಾರ, ವಿಶಾಲಾ ಕಾನಪೇಟ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಲಕ್ಷ್ಮಿ ಕಾಂಬಳೆ, ಶೈಲಜಾ ಅರಕೇರಿ, ಗ್ರಾಮೀಣ ಪೊಲೀಸ್ ಠಾಣೆ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ ಮೂಲಕ ಮನೆ ಭೇಟಿ ಮಾಡಿ ನಡೆಯ ಬಹುದಾಗಿದ್ದ ಬಾಲ್ಯ ವಿವಾಹವನ್ನ ತಡೆ ಹಿಡಿದಿದ್ದಾರೆ.Body:ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿ ಹುಬ್ಬಳ್ಳಿಯಲ್ಲಿ ತಾತ್ಕಾಲಿಕ ಅಭಿರಕ್ಷಣೆಗಾಗಿ ಬಾಲಕಿಯನ್ನು ಕರೆದುಕೊಂಡು ನಂತರ ಇವರ ಮೂಲಕ ನೆರೆದ ಜನರಿಗೆ ಮನವೊಲಿಸಿ ಬಾಲ್ಯ ವಿವಾಹ ನಿಷೇಧ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ 2016 ಬಗ್ಗೆ ತಿಳಿಸಿ ಬಾಲಕಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಎರಡು ಕುಟುಂಬದವರಿಗೆ ಪ್ರಾಥಮಿಕ ಹಂತದ ವಿಚಾರಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮೇ ೧೭ ರಂದು ಹಾಜರಾಗಲು ನೋಟೀಸ್ ನೀಡಲಾಗಿದೆConclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.