ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜೆಡಿಎಸ್ ನಾಯಕ ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಿದ್ಧವಾಗಿದೆ. ಈ ಮೂಲಕ ಜಿಡಿಎಸ್ನ ಮತ್ತೊಂದು ವಿಕೆಟ್ ಪತನವಾದಂತಾಗಿದೆ.
ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ನಾಳೆ ತೆನೆ ಇಳಿಸಿ, ಕೈ ಹಿಡಿಯಲಿದ್ದಾರೆ. ಕಳೆದ ಕೆಲ ದಿನಗಳಿಂದ ಕೋನರಡ್ಡಿ ಕಾಂಗ್ರೆಸ್ ಸೇರ್ಪಡೆ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಈಗ ಮೂಹೂರ್ತ ಫಿಕ್ಸ್ ಆಗಿದೆ.
ಇದನ್ನೂ ಓದಿ: ಕೀರ್ತಿ ಜೊತೆ ಕಿರಿಕ್ ಪ್ರಕರಣ: ಐವರು ಆರೋಪಿಗಳ ಬಂಧನ
ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೋನರೆಡ್ಡಿ ಅಧಿಕೃತವಾಗಿ ಸೇರಲಿದ್ದು, ಈ ಭಾಗದಲ್ಲಿ ಬಸವರಾಜ್ ಹೊರಟ್ಟಿಯವರನ್ನು ಬಿಟ್ಟರೆ ಯಾವೊಬ್ಬ ನಾಯಕನು ಇಲ್ಲದಂತ ಸ್ಥಿತಿ ಜೆಡಿಎಸ್ ಗೆ ನಿರ್ಮಾಣ ಆಗಿದೆ. ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.