ಹುಬ್ಬಳ್ಳಿ: ಮಾಸ್ಕ್ ಧರಿಸದೆ ಓಡಾಡುವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆ 1976ರ ಕಲಂ 431ರ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಅವಳಿ ನಗರದಲ್ಲಿ ಮಾಸ್ಕ್ ಧರಿಸದೆ ಅನವಶ್ಯಕವಾಗಿ ಓಡಾಡುವವರಿಗೆ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ, ರಸ್ತೆ ಬದಿಯಲ್ಲಿ ಉಗುಳಿದವರಿಂದ ವಿವಿಧ ವಲಯ ಕಚೇರಿಗಳ ವ್ಯಾಪ್ತಿಯಲ್ಲಿ ಇಂದು ಒಂದೇ ದಿನ ಒಟ್ಟು 21,700 ರೂ. ದಂಡ ವಸೂಲಿ ಮಾಡಲಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ ಇದುವರೆಗೆ ಒಟ್ಟು 29,900 ರೂ. ದಂಡ ವಿಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.