ETV Bharat / state

ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತ ಭೇಟಿ - ಕ್ವಾರಂಟೈನ್ ಕೇಂದ್ರ

ಕ್ವಾರಂಟೈನ್‍ನಲ್ಲಿರುವ ಜನರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತ, ಅಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಚರ್ಚಿಸಿದರು.

officials
officials
author img

By

Published : May 29, 2020, 10:11 AM IST

Updated : May 29, 2020, 10:38 AM IST

ಧಾರವಾಡ: ಹೊರರಾಜ್ಯಗಳಿಂದ ಆಗಮಿಸಿದ ಜನರನ್ನು ಪ್ರತ್ಯೇಕವಾಗಿ ಸಾಂಸ್ಥಿಕ ಮತ್ತು ಹೋಟೆಲ್ ಕ್ವಾರಂಟೈನ್ ಮಾಡಲಾಗಿರುವ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ್ ಗುಪ್ತ ಭೇಟಿ ನೀಡಿದರು.

ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ

ಕ್ವಾರಂಟೈನ್‍ನಲ್ಲಿರುವ ಜನರೊಂದಿಗೆ ಮಾತುಕತೆ ನಡೆಸಿದ ಅವರು ಅಲ್ಲಿ ದೊರೆಯುತ್ತಿರುವ ಸೌಲಭ್ಯಗಳು, ಲಾಕ್‍ಡೌನ್ ಕಾರಣದಿಂದ ಎದುರಾಗಿರುವ ಅವರ ವೃತ್ತಿಸಂಬಂಧಿ ಸವಾಲುಗಳು, ಮುಂಬರುವ ದಿನಗಳಲ್ಲಿ ಜೀವನ ನಿರ್ವಹಣೆಗೆ ಹಾಕಿಕೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದರು.

officials visits quarantine center

ಸರ್ಕಾರದಿಂದ ಗ್ರಾಮೀಣ ಭಾಗದ ಜನರಿಗೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ಸೌಕರ್ಯಗಳ ಸದುಪಯೋಗ ಪಡೆಯಲು ಸಲಹೆ ನೀಡಿದರು.

ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಲಾಗಿರುವ ಹೊರರಾಜ್ಯದಿಂದ ಆಗಮಿಸುವ ಜನರ ನೋಂದಣಿ ಮತ್ತು ತಪಾಸಣೆ ಕೇಂದ್ರ, ಸ್ವಂತ ವೆಚ್ಚದಲ್ಲಿ ಹೋಟೆಲ್ ಕ್ವಾರಂಟೈನ್ ಸೌಲಭ್ಯ ಪಡೆದಿರುವ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ.ಸಿ. ಸತೀಶ್, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Last Updated : May 29, 2020, 10:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.