ETV Bharat / state

ಹುಬ್ಬಳ್ಳಿ ಗಲಭೆ ಪ್ರಕರಣ: 11 ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ

author img

By

Published : May 18, 2022, 1:28 PM IST

ಹಳೇ ಹುಬ್ಬಳ್ಳಿ ಗಲಭೆ ಸಂಬಂಧ ಪೊಲೀಸರು ದಾಖಲಿಸಿಕೊಂಡಿದ್ದ ಕೇಸ್​ಗಳ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

old hubballi riot case
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿಕೊಂಡಿದ್ದ ಪೈಕಿ 11 ಪ್ರಕರಣಗಳಿಗೆ ಹೈಕೋರ್ಟ್ ಪೀಠ, ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಳೇ ಹುಬ್ಬಳ್ಳಿಯಲ್ಲಿ ಏ. 16ರಂದು ನಡೆದ ಗಲಭೆಗೆ ಸಂಬಂಧಿಸಿ, ಹಳೆಯ ಹುಬ್ಬಳ್ಳಿಯ ಪೊಲೀಸ್ ಠಾಣೆ ಸೇರಿದಂತೆ ಸುತ್ತಿನ ಪ್ರದೇಶದಲ್ಲಿ ಗಲಾಟೆ ಮಾಡಿದ್ದ 157 ಜನರ ವಿರುದ್ಧ 12 ಪ್ರಕರಣ ದಾಖಲಾಗಿವೆ.

ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ದೂರುಗಳನ್ನು ದಾಖಲಿಸಿಕೊಂಡಿರುವುದು ಸರಿಯಲ್ಲ. ಹೀಗಾಗಿ ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣಗಳು ಅನುರ್ಜಿತಗೊಳಿಸಬೇಕು ಎಂದು ಮಹಮ್ಮದ್ ಆರೀಫ್ ನಾಗರಾಳ ಸೇರಿದಂತೆ ಇತರ 157 ಜನರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ, ಪೊಲೀಸರು ದಾಖಲಿಸಿಕೊಂಡಿದ್ದ 12 ಪ್ರಕರಣಗಳ ಪೈಕಿ, 11 ಪ್ರಕರಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಜೂ. 7ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ವಕೀಲರಾದ ವಿಶ್ವನಾಥ ಬೀಚಗತ್ತಿ ವಾದ ಮಂಡಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ: ಏಳು ಮಂದಿಗೆ ಷರತ್ತು ಬದ್ಧ ಜಾಮೀನು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.