ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ನಡೆದ ಪ್ರದೇಶಕ್ಕೆ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಇದೇ ವೇಳೆ ದಿಡ್ಡಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ನೋಡಿದ್ರೆ ಪೂರ್ವನಿಯೋಜಿತ ಅನಿಸುತ್ತದೆ. ಇದೊಂದು ಭಾವನೆಗಳಿಂದ ಕೆರಳಿದ ಘಟನೆ ಅಲ್ಲ. ದೇವಾಲಯಗಳ ಮೇಲೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಗಲಭೆಗೆ ಯಾರೇ ಕಾರಣವಾಗಿರಲಿ, ನಾವು ಅವರನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಗೃಹ ಸಚಿವ ಅಸಮರ್ಥ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರೇ 5 ವರ್ಷ ಅಸಮರ್ಥವಾಗಿ ಆಡಳಿತ ಮಾಡಿದ್ದಾರೆ. ಅವರಷ್ಟು ಅಸಮರ್ಥರು ನಮ್ಮ ಗೃಹ ಸಚಿವರಲ್ಲ. ಸಿದ್ದರಾಮಣ್ಣ ಸರ್ಕಾರದಲ್ಲಿ ಅತಿ ಹೆಚ್ಚು ಗಲಭೆ ಆಗಿವೆ. ಅವರ ಕಾಲದಲ್ಲಿ ಹೆಚ್ಚು ಹಿಂದೂ ಯುವಕರ ಹತ್ಯೆಗಳಾಗಿವೆ. ಜೈಲಿನಲ್ಲಿ ಸಹ ಕೆಲವರ ಹತ್ಯೆಯಾಗಿದೆ ಎಂದು ಹರಿಹಾಯ್ದರು.
ಇದನ್ನೂ ಓದಿ: ಪಿಎಸ್ಐ ಅಕ್ರಮ ನೇಮಕಾತಿ: ಮತ್ತೋರ್ವ ಅಭ್ಯರ್ಥಿ ಬಂಧಿಸಿದ ಸಿಐಡಿ