ಹುಬ್ಬಳ್ಳಿ: ನಗರದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದೆ.
ಇಲ್ಲಿನ ಭೈರಿದೇವರಕೊಪ್ಪದ ಶಾಂತಿನಿಕೇತನ ಕಾಲೋನಿಯ ನಿವಾಸಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸೋಂಕಿತರ ನಿವಾಸದಿಂದ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಗೂ ತಾತ್ಕಾಲಿಕ ಕಟ್ಟಿಗೆಯಿಂದ ನಿರ್ಬಂಧ ಹಾಕಲಾಗಿದೆ. ಸಾರ್ವಜನಿಕರು ಹೊರ ಬರದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.