ಧಾರವಾಡ: ಡೀಸೆಲ್ ಟ್ಯಾಂಕರ್ ಉರುಳಿ ಹೊತ್ತಿ ಉರಿದು, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಹೊರವಲಯದ ಯರಿಕೊಪ್ಪ ಬೈಪಾಸ್ ಬಳಿ ನಡೆಯಿತು. ಬೆಂಕಿಯಲ್ಲಿ ಇನ್ನೋರ್ವ ಸುಟ್ಟು ಕರಕಲಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು ಖಚಿತವಾಗಿಲ್ಲ.
ರಾಷ್ಟ್ರೀಯ ಹೆದ್ದಾರಿ ನಂ. 4ರ ಬೈಪಾಸ್‌ನಲ್ಲಿ ದುರ್ಘಟನೆ ಘಟಿಸಿದೆ. ಬೆಂಕಿ ನಂದಿಸಲು ಮೂರು ಅಗ್ನಿ ಶಾಮಕದಳ ವಾಹನದ ಸಿಬ್ಬಂದಿ ಹರಸಾಹಸಪಟ್ಟರು. ರಸ್ತೆಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ