ETV Bharat / state

ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು, ಇದಕ್ಕೂ ಬಿಜೆಪಿಗೂ ಸಂಬಂಧವಿಲ್ಲ: ಸಿದ್ದರಾಮಯ್ಯ - ಬಿಜೆಪಿ ಗ್ರಾಮ ಸ್ವರಾಜ್ಯ ಅಭಿಯಾನ

ಗ್ರಾಮ ಪಂಚಾಯತ್ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಈ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿಯವರು ಯಾವತ್ತೂ ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Opposition leader Siddaramaiah talk about bjp party
ಸಿದ್ದರಾಮಯ್ಯ ಕಿಡಿ
author img

By

Published : Dec 11, 2020, 10:40 PM IST

ಹುಬ್ಬಳ್ಳಿ: ಮಹಾತ್ಮ ಗಾಂಧಿಯವರು ಜಾರಿಗೆ ತಂದಿರುವ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ಬಿಜೆಪಿಯವರು ಈಗ ರಾಜಕೀಯ ಲಾಭಕ್ಕಾಗಿ ನಾವು ಜಾರಿಗೆ ತಂದಿದ್ದೇವೆ ಎಂದು ಬಿಜೆಪಿಯ ಗ್ರಾಮ ಸ್ವರಾಜ್ಯ ಅಭಿಯಾನ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ನಗರದಲ್ಲಿಂದು ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಈ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿಯವರು ಯಾವತ್ತೂ ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಕಿಡಿಕಾರಿದರು.

ರಾಜಕೀಯ ಮೀಸಲಾತಿ ಕಾಂಗ್ರೆಸ್ ಕೊಡುಗೆಯಾಗಿದೆ. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರೀಕರಣ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ. ಗ್ರಾಮ ಸ್ವರಾಜ್ಯ ಕಾಂಗ್ರೆಸ್​​ನ ಕೂಸು, ಅದು ಬಿಜೆಪಿಗೆ ಸಂಬಂಧವಿಲ್ಲ ಎಂದರು. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ. ಹಣ ಚೆಲ್ಲಿ, ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿಯವರು ತಿಪ್ಪರಲಾಗ ಹಾಕಿದರೂ ಬಹುಮತ ಪಡೆಯಲು ಸಾಧ್ಯವಿಲ್ಲ ಎಂದರು.

ಓದಿ: ಚಿಟ್​ ಫಂಡ್​ ಹಗರಣದ ತನಿಖೆಯಲ್ಲಿ ಹಸ್ತಕ್ಷೇಪ ಆರೋಪ: ಸಿಬಿಐ ನಿರ್ದೇಶಕರಿಗೆ ಸುವೇಂದು ಪ್ರಶ್ನೆ

ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಆದರೆ ಕಾಂಗ್ರೆಸ್ ಜಾರಿಗೊಳಿಸಿದ ಬಹುತೇಕ ಯೋಜನೆಯನ್ನು ಬಿಜೆಪಿ ನಿಲ್ಲಿಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕಾಂಗ್ರೆಸ್ ಅಭಿವೃದ್ಧಿ ಕಾರ್ಯದ ಬಗ್ಗೆ ಗೊತ್ತಿದೆ ಎಂದರು.

ಗ್ರಾಮ ಪಂಚಾಯತಿ ಸೀಟ್ ಹರಾಜು ವಿಷಯದ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಸೀಟು ಹರಾಜು ಹಾಕಬಾರದು. ಅದು ಕಾನೂನು ಬಾಹಿರ. ಹೀಗೆ ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು. ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.