ಹುಬ್ಬಳ್ಳಿ: ಸಾಮಾಜಿಕ ಸೇವೆಗಾಗಿ ಮಹಿಳೆಯರಿಗಾಗಿ ಸೌಂದರ್ಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ ಆಫ್ ಮಿಡ್ ಟೌನ್ ಕ್ಲಬ್ ಅಧ್ಯಕ್ಷೆ ಶ್ರೀವಳ್ಳಿ ಹೆಬಸೂರು ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ. 5ರಿಂದ 2 ದಿನಗಳ ಕಾಲ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಎರಡು ವರ್ಷದಿಂದ ಈ ಸ್ಪರ್ಧೆ ಆಯೋಜನೆ ಮಾಡುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಸ್ಪರ್ಧೆಯಿಂದ ಸಂಗ್ರಹವಾಗುವ ಹಣವನ್ನು ಬಡ ಹೆಣ್ಣು ಮಕ್ಕಳ ಶಿಕ್ಷಣ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತಿದೆ ಎಂದರು.
ಓದಿ: ಪೊಗರು ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ... ಕ್ಷಮೆ ಕೇಳಿದ ನಿರ್ಮಾಪಕ!
18-30ರೊಳಗಿನ ಅವಿವಾಹಿತ, 25-40 ವಿವಾಹಿತ, 41ರಿಂದ ಮೇಲ್ಪಟ್ಟವರು ಹಾಗೂ ಇತರೆ ವಿವಾಹಿತರಿಗೆ ಪ್ರತ್ಯೇಕವಾಗಿ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪ್ರತಿಯೊಂದು ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ಎಲ್ಲಾ ವಿಭಾಗಗಳಿಂದ ಹತ್ತು ಜನರಿಗೆ ಪ್ರಶಸ್ತಿ ನೀಡಲಾಗುವುದು. ಈ ಬಾರಿ ನೂರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.