ಹುಬ್ಬಳ್ಳಿ: ಕೇಂದ್ರ ಸರ್ಕಾರದ ಎಂ.ಇ.ಸಿ.ಎಲ್ ಕಂಪನಿಯ ಸಿ.ಎಸ್.ಆರ್ ನಿಧಿಯಡಿ ನೀಡಲಾದ 10 ಕಿಲೋ ಲೀಟರ್ ಸಾಮರ್ಥ್ಯದ 51 ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಹಾಗೂ ಯುನಿಟೈಡ್ ವೇ ಬೆಂಗಳೂರು ಕಂಪನಿಯಿಂದ ನೀಡಲಾದ 100 ಆಕ್ಸಿಜನ್ ತುಂಬಲು ಅನುವಾಗುವ ಖಾಲಿ ಸಿಲಿಂಡರ್‌ಗಳನ್ನು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾಡಳಿತಕ್ಕೆ ನೀಡಲಾಯಿತು.
ತಾಲೂಕು ಕೇಂದ್ರಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಹಂಚಿಕೆ
ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾದ ಆಕ್ಸಿಜನ್ ಕಾನ್ಸಂಟ್ರೇಟರ್ಸ್‌ಗಳಲ್ಲಿ ಕಲಘಟಗಿ 10, ಕುಂದಗೋಳ 10, ನವಲುಗಂದ 10, ಅಣ್ಣಿಗೇರಿ ಹಾಗೂ ಅಳ್ನಾವರಕ್ಕೆ ತಲಾ ಐದನ್ನು ಒದಗಿಸಲಾಗಿದೆ. ಉಳಿದ ಕಾನ್ಸಂಟ್ರೇಟರ್ಸ್ ಹಾಗೂ ಖಾಲಿ ಸಿಲಿಂಡರ್‌ಗಳನ್ನು ಅಗತ್ಯಾನುಸಾರ ಹಂಚಿಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ್, ಪ್ರದೀಪ್ ಶೆಟ್ಟರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲ್ಬುರ್ಗಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.