ಹುಬ್ಬಳ್ಳಿ: ಹಿರಿಯ ಸಾಹಿತಿ, ಶತಾಯುಶಿ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಆರೋಗ್ಯದಲ್ಲಿ ಏರುಪೇರಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ.
ಕೆಮ್ಮು ಹಾಗೂ ಕಫದ ಸಮಸ್ಯೆಯಿಂದಾಗಿ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿದ್ದಾರೆ ಪಾಪು. ವೈದ್ಯರ ತಂಡ ಪ್ರತಿಕ್ಷಣವೂ ಅವರ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ.